ETV Bharat / state

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023: ಅಂತಿಮ ಮತದಾರರ ಪಟ್ಟಿ ಪ್ರಕಟ - ಮತಗಟ್ಟೆ ಮಟ್ಟದ ಅಧಿಕಾರಿ

ಮತದಾರರ ಅಂತಿಮ ಪಟ್ಟಿ ಪ್ರಕಟಣೆ- ವೆಬ್​ಸೈಟ್​ ಮುಖಾಂತರ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

electoral-roll-special-revision-2023-final-electoral-roll-published
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023: ಅಂತಿಮ ಮತದಾರರ ಪಟ್ಟಿ ಪ್ರಕಟ....
author img

By

Published : Jan 15, 2023, 10:44 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 3 ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರಕ್ಕೆ ಸಂಬಂಧಿಸಿದಂತೆ ಇಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 9,80,542 ಮತದಾರರಿದ್ದಾರೆ ಎಂದು ಘೋಷಿಸಲಾಗಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ 25 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಜನವರಿ 5 ರಂದು ಪ್ರಕಟಿಸಲಾಗಿತ್ತು. ಇದೀಗ ಉಳಿದ 3 ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರದಲ್ಲಿನ 9,90,542 ಮತದಾರರು ಮತದಾರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದರಲ್ಲಿ 5,15,983 ಪುರುಷರು, 4,64,415 ಮಹಿಳೆಯರು ಹಾಗೂ 144 ಇತರೆ (ತೃತೀಯ ಲಿಂಗಿಗಳು) ಮತದಾರರಿದ್ದಾರೆ.

ಈ 3 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದು ಪ್ರಕಟಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್ ಈ ಸಂದರ್ಭದಲ್ಲಿ ತಿಳಿಸಿದರು.

ವೆಬ್​ಸೈಟ್ ಗಳಲ್ಲಿ ಪ್ರಕಟ: ಸಿಇಒ ವೆಬ್ಸೈಟ್ http://www.ceokarnataka.kar.nic.in ಮತ್ತು ಬಿಬಿಎಂಪಿ ವೆಬ್ಸೈಟ್ www.bbmp.gov.in ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಾರಿಯಲ್ಲಿರಲಿರುವ ಮತದಾರರ ಪಟ್ಟಿ ಸೇರ್ಪಡೆ ಪ್ರಕ್ರಿಯೆ: ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ ವೋಟರ್ ಹೆಲ್ಪ್ ಲೈನ್ ಆಪ್, ಎನ್.ಎಸ್.ವಿ.ಪಿ ಪೋರ್ಟಲ್ (www.nvsp.in), 1950 ವೋಟರ್ ಹೆಲ್ಪ್ ಲೈನ್, ವೋಟರ್ ಪೋರ್ಟಲ್ (www.voterportal.eci.gov.in) ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ಕೋರಿದರು.

ಮತಗಟ್ಟೆಗಳ ಪರಿಶೀಲನೆ ಪ್ರಾರಂಭ: ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಪರಿಶೀಲನೆಯನ್ನು ಸಹಾಯಕ ಮತದಾನ ನೋಂದಣಾಧಿಕಾರಿಗಳು ನಾಳೆಯಿಂದ ಪ್ರಾರಂಭಿಸಲಿದ್ದಾರೆ ಎಂದು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಗೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿ ದಯಾನಂದ್ (ಬೆಂಗಳೂರು ನಗರ), ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಹಾಗೂ ಇನ್ನಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

ಮನೆ ಮನೆ ಸಮೀಕ್ಷೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕಾರ್ಯ ಚಟುವಟಿಕೆಗಳ ಅಂಗವಾಗಿ ಕಳೆದ ವರ್ಷ ನವೆಂಬರ್, ಡಿಸೆಂಬರ್​ ತಿಂಗಳಲ್ಲಿ ಬಿಎಲ್​ಒ (ಮತಗಟ್ಟೆ ಮಟ್ಟದ ಅಧಿಕಾರಿ) ಗಳಿಂದ ಮೆನೆ ಮನೆ ಸಮೀಕ್ಷೆ ನಡೆಸಲಾಗಿತ್ತು. ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯ ನಡೆಸಲಾಗಿದೆ.

ಇದನ್ನೂ ಓದಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಶ: ವಿಸ್ಮಯ ಕಣ್ತುಂಬಿಕೊಂಡು ಪುನೀತರಾದ ಭಕ್ತರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.