ETV Bharat / state

ಬೆಂಗಳೂರು: ವಿದ್ಯುತ್​​​​​ ತಂತಿ ತಗುಲಿ ಎಲೆಕ್ಟ್ರಾನಿಕ್ ಎಂಜಿನಿಯರ್​​ ಸಾವು - ವಿದ್ಯುತ್ ವೈರ್ ತಗುಲಿ ಎಲೆಕ್ಟ್ರಾನಿಕ್ ಎಂಜಿನಿಯರ್ ಸಾವು

ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಎಲೆಕ್ಟ್ರಾನಿಕ್ ಎಂಜಿನಿಯರ್​​ವೋರ್ವ ಮೃತಪಟ್ಟಿರುವ ಘಟನೆ ವೈಟ್‌ ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Electronic engineer died  by touching electric wire
ಚಂದ್ರಶೇಖರ್ ಮೃತ ಎಂಜಿನಿಯರ್
author img

By

Published : Mar 11, 2020, 9:51 AM IST

ಬೆಂಗಳೂರು: ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಎಲೆಕ್ಟ್ರಾನಿಕ್ ಎಂಜಿನಿಯರ್​​ವೋರ್ವ ಮೃತಪಟ್ಟಿರುವ ಘಟನೆ ವೈಟ್‌ ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಂದ್ರಶೇಖರ್ (26) ಮೃತ ಎಂಜಿನಿಯರ್. ಮೂಲತಃ ಚಿತ್ರದುರ್ಗದವರಾದ ಇವರು ಒಂದು ವರ್ಷದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದು, ವಿದ್ಯುತ್ ನಿರ್ವಹಣಾ ವಿಭಾಗದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಸೋಮವಾರ ರಾತ್ರಿ ಕಂಪನಿ ಕಚೇರಿಗೆ ಬಂದಿದ್ದ ಚಂದ್ರಶೇಖರ್, ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಕಂಪನಿಯ ನಿರ್ಲಕ್ಷ್ಯದಿಂದಲೇ ತಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೃತನ ಪೋಷಕರ ದೂರು ಆಧರಿಸಿ ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.