ಆನೇಕಲ್ (ಬೆಂಗಳೂರು ನಗರ): ತಾಲೂಕಿನ ತೆಲಗರಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ತೆಲಗರಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿಯಿಂದಲೇ ಕಾಡಾನೆಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರು ಅರಣ್ಯಾಧಿಕಾರಿಗಳ ಮೊರೆ ಹೋಗಿದ್ದಾರೆ. ಈ ಹಿಂದೆಯೂ ಕೂಡ ಕಾಡಾನೆಗಳ ಹಿಂಡು ಆಹಾರ ಅರಸಿ ತಮಿಳುನಾಡು ಕಡೆಯಿಂದ ಆನೇಕಲ್ ಕಡೆ ಬಂದಿದ್ದವು.
ಇದೀಗ ಎರಡನೇ ಬಾರಿಗೆ ಬಂದಿದ್ದು, ಕಾಡಾನೆಗಳನ್ನು ತಮಿಳುನಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.