ETV Bharat / state

ವಿಪಕ್ಷ ನಾಯಕನ ಆಯ್ಕೆ ವಿಳಂಬದಿಂದ ಮುಜುಗರವಾಗಿದೆ: ಎನ್ ರವಿಕುಮಾರ್ - ವಿಧಾನ ಪರಿಷತ್ ಸದಸ್ಯ

ಎರಡು ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆ. ಆದರೆ, ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವಲ್ಲಿ ನಮ್ಮ ಬಿಜೆಪಿ ಪಕ್ಷ ಹಿಂದೆ ಸರಿದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

N Ravikumar spoke to reporters.
ಎನ್ ರವಿಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.
author img

By

Published : Jul 8, 2023, 5:29 PM IST

ಬೆಂಗಳೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬದಿಂದ ಮುಜುಗರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಳಂಬ ಆಗಿದೆ ನಿಜ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಯಾಗಬೇಕಿತ್ತು. ಆದರೆ ಪಕ್ಷದಿಂದ ಬೇರೆ ಏನೋ ಕಾರಣಕ್ಕೆ ಆಗಿಲ್ಲ. ಇನ್ನೂ ಎರಡು ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆ. ಇಷ್ಟು ದಿನಗಳ ನೇಮಕ ವಿಳಂಬ ದಿಂದ ಮುಜುಗರ ಆಗ್ತಿದೆ. ಆದರೆ, ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವಲ್ಲಿ ನಮ್ಮ ಪಕ್ಷ ಹಿಂದೆ ಸರಿದಿಲ್ಲ ಎಂದು ತಿಳಿಸಿದರು.

ಜೈನಮುನಿ ಹತ್ಯೆ, ಬಿಜೆಪಿ ನಿಯೋಗ ಭೇಟಿ: ಇವತ್ತು ಜೈನ ಮುನಿಗಳೊಬ್ಬರ ಹತ್ಯೆ ಆಗಿದೆ. ನಾಳೆ ಬಿಜೆಪಿ ನಿಯೋಗದಿಂದ ಅಲ್ಲಿಗೆ ಭೇಟಿ ಕೊಡ್ತಿದ್ದೇವೆ. ಹೀಗಾಗಿ ಬಿಜೆಪಿ ರಾಜ್ಯದ ಯಾವುದೇ ಸಮಾಜದ ಜನರ ಸುರಕ್ಷಿತತೆಯ ಪರ‌ ಯಾವಾಗಲೂ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದರು.

ಬಡವರ ವಿರೋಧಿ ಸರ್ಕಾರ: ಬಜೆಟ್ ನಲ್ಲಿ ಬಿಜೆಪಿ ಸರ್ಕಾರದ ಕಾರ್ಯಕ್ರಮ ಕೈ ಬಿಟ್ಟಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೊಂದು ಬಡವರ ವಿರೋಧಿ ಸರ್ಕಾರ. ನಾವು ಬಡವರಪರ ಮಾಡಿದ ಕೆಲ‌ ಅಭಿವೃದ್ಧಿ ಕಾರ್ಯಕ್ರಮಗಳನ್ನ ಕೈ ಬಿಟ್ಟಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ವಿದ್ಯಾನಿಧಿ ಕೈಬಿಟ್ಟಿದ್ದಾರೆ. ಬಡವರಿಗೆ ಸಹಾಯ ಮಾಡುವ ಯೋಜನೆ ಆಗಿತ್ತು. ಶ್ರಮಶಕ್ತಿ ಯೋಜನೆ, ಅಗ್ನಿ ವೀರ ತರಬೇತಿ ಯೋಜನೆ, ವಿವೇಕ ಶಾಲೆ ಎಂಬ ಯೋಜನೆಯನ್ನು ಕೈಬಿಡಲಾಗಿದೆ. ಬಜೆಟ್ ಮಂಡನೆ ವೇಳೆ ದ್ವೇಷದ ರಾಜಕಾರಣವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಇದೊಂದು ಸಾಲದ ಬಜೆಟ್ ಎಂದು ಟೀಕೆ ಮಾಡಿದರು.

ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ನಮ್ಮ ಪಕ್ಷದವರೇ: ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬೆಳಗಾವಿಯ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ ಘೋಷಣೆ ಮಾಡಿದರೂ ಅದನ್ನು ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ: ನೀವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ. ಪಕ್ಷದ ಸಂಘಟನೆಯಲ್ಲಿ ನಾನಿರುತ್ತೇನೆ. ರಾಜ್ಯಾಧ್ಯಕ್ಷನಾಗಿಯೇ ಪಕ್ಷ ಸಂಘಟನೆ ಮಾಡಬೇಕು ಅಂತಾ ಏನೂ ಇಲ್ಲ. ಬೆಳಗಾವಿ ವಿಭಾಗದಲ್ಲಿ ಯಾವುದೇ ಹುದ್ದೆಯನ್ನು ತೆಗೆದುಕೊಳ್ಳದೆಯೇ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂಓದಿ: PM Modi: ತೆಲಂಗಾಣದಲ್ಲಿ 6100 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.