ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.
ಪರಮೇಶ್ವರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ಜಯಮಾಲಾ, ಶಾಸಕ ಸೋಮಶೇಖರ್, ಬೈರತಿ ಬಸವರಾಜ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ, ಈ ಸೋಲನ್ನು ಒಟ್ಟಾಗಿ ಹೇಗೆ ಸಮರ್ಥಿಸಿಕೋಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.