ETV Bharat / state

ಬಿಜೆಪಿಯಲ್ಲಿ ಮುಂದುವರೆದ ಬಂಡಾಯ: ರಾಜ್ಯ ನಾಯಕರ ತುರ್ತು ಸಭೆ ಕರೆದ ಬಿ.ಎಲ್.ಸಂತೋಷ್ - ETV Bharat kannada News

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ತುರ್ತು ಸಭೆ ಕರೆಯಲಾಗಿದೆ.

Emergency meeting of state BJP leaders
ರಾಜ್ಯ ಬಿಜೆಪಿ ನಾಯಕರ ತುರ್ತು ಸಭೆ
author img

By

Published : Apr 14, 2023, 5:28 PM IST

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಕಮಲ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಿಸುವಂತೆ ಹೈಕಮಾಂಡ್​ನಿಂದ ಸಂದೇಶ ಬಂದಿದ್ದು, ಪರಿಸ್ಥಿತಿ ಅವಲೋಕಿಸಲು ರಾಜ್ಯ ಬಿಜೆಪಿ ನಾಯಕರ ತುರ್ತು ಸಭೆಯನ್ನು ಕರೆಯಲಾಗಿದೆ.

ಇಂದು ಸಂಜೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ವಿಶೇಷ ಸಭೆ ಕರೆಯಲಾಗಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ನಡೆದ ಚುನಾವಣೆ, ಉಪಚುನಾವಣೆ; ಗೆದ್ದವರ‍್ಯಾರು, ಸೋತವರ‍್ಯಾರು?

189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ ನಂತರ ಟಿಕೆಟ್ ಕೈತಪ್ಪಿದ ಹಾಲಿ ಶಾಸಕರು ಅಸಮಧಾನಗೊಂಡಿದ್ದಾರೆ. 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಇದು ಮುಂದುವರೆದಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವರಾದ ಆರ್.ಶಂಕರ್, ಗೂಳಿಹಟ್ಟಿ ಶೇಖರ್, ಶಶಿಕಾಂತ್ ನಾಯಕ್, ಸೊಗಡು ಶಿವಣ್ಣ, ಹಾಲಿ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಶಾಸಕ ನೆಹರೂ ಓಲೇಕಾರ್ ಕೂಡ ರಾಜೀನಾಮೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ಲಕ್ಷ್ಮಣ ಸವದಿ ಇಂದು ಸಂಜೆ ಬಿಜೆಪಿಗೆ ಗುಡ್​ಬೈ.. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಜೊತೆ ಬೆಂಗಳೂರಿನತ್ತ ಪ್ರಯಾಣ

ಮತ್ತೊಂದೆಡೆ ರಘುಪತಿ ಭಟ್, ಸುಕುಮಾರ ಶೆಟ್ಟಿ ಸೇರಿದಂತೆ ಹಲವರ ಮನವೊಲಿಕೆ ಕಾರ್ಯ ನಡೆದಿದೆ. ಇದರ ನಡುವೆ ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ಬಿಜೆಪಿ ತೊರೆದಿದ್ದರಿಂದ ಬೆಳಗಾವಿ ರಾಜಕಾರಣದಲ್ಲಿ ಲಿಂಗಾಯತ ಮತ ಬ್ಯಾಂಕ್ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಜಗದೀಶ್ ಶೆಟ್ಟರ್ ವಿಚಾರದಲ್ಲಿ ಹೆಚ್ಚು ಕಡಿಮೆಯಾದರೂ ಲಿಂಗಾಯತ ಮತ ಬ್ಯಾಂಕ್ ಬಿಜೆಪಿಯಿಂದ ಜಾರಲಿದೆ ಎನ್ನುವ ಆತಂಕ ಎದುರಾಗಿದೆ. ಹೀಗಾಗಿ ತುರ್ತು ಸಭೆ ಕರೆಯಲಾಗಿದ್ದು, ಬಂಡಾಯದ ಸಾಧಕ-ಬಾಧಕ ಕುರಿತು ಚರ್ಚೆ ನಡೆಸಲಾಗುತ್ತದೆ.

ಎಲ್ಲೆಲ್ಲಿ ಬಂಡಾಯ ಶಮನ ಮಾಡಲಾಗಿದೆ. ಎಲ್ಲಿ ಮನವೊಲಿಕೆ ಸಾಧ್ಯವಾಗಿಲ್ಲ ಎನ್ನುವ ಕುರಿತು ಚರ್ಚೆ ನಡೆಸಿ ಪಕ್ಷದ ನಾಯಕರೆಲ್ಲಾ ಒಟ್ಟಾಗಿ ಅಸಮಧಾನಿತರ ಮನವೊಲಿಕೆ ಮಾಡಬೇಕು ಎನ್ನುವ ಕುರಿತು ಮಹತ್ವದ ಸಮಾಲೋಚನೆ ನಡೆಯಲಿದೆ. ಹೈಕಮಾಂಡ್ ನಿಂದ ಕೆಲವೊಂದು ಸಂದೇಶಗಳು ಬಂದಿದ್ದು, ಅದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದನ್ನೂ ಓದಿ : ಪಕ್ಷ ತೊರೆದವರಿಗೆ ಬಿಜೆಪಿ ಬಾಗಿಲು ಶಾಶ್ವತವಾಗಿ ಮುಚ್ಚಲಿದೆ, ನಾಲ್ಕು ಜನ ಹೋದರೆ ಪಕ್ಷಕ್ಕೇನು ನಷ್ಟವಿಲ್ಲ: ಅರುಣ್ ಸಿಂಗ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.