ETV Bharat / state

ಕೊರೊನಾ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಒದಗಿಸಲು ಒತ್ತು ನೀಡಿ: ಸಚಿವ ಸೋಮಣ್ಣ - Emphasis on providing facilities to Corona patients

ಕೊರೊನಾ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಒದಗಿಸಲು ಒತ್ತು ನೀಡಿ. ಪ್ರತಿ ವಾರ್ಡ್​ಗೊಂದು ಫೀವರ್ ಕ್ಲಿನಿಕ್ ಸ್ಥಾಪಿಸಬೇಕು ಎಂದು ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಲಯದ ಕೋವಿಡ್ ನಿಯಂತ್ರಣಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಲಯದ ಕೋವಿಡ್ ನಿಯಂತ್ರಣಾ ಉಸ್ತುವಾರಿ ಸಚಿವ ವಿ. ಸೋಮಣ್ಣ

author img

By

Published : Jul 10, 2020, 12:31 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಲಯದ ಕೋವಿಡ್ ನಿಯಂತ್ರಣಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಅವರು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಸಚಿವ ವಿ. ಸೋಮಣ್ಣ  ಸಭೆ
ಸಚಿವ ವಿ. ಸೋಮಣ್ಣ ಸಭೆ

ವಸಂತನಗರದ ದೇವರಾಜು ಅರಸು ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್, ಶಾಸಕ ರಿಜ್ವಾನ್ ಹರ್ಷದ್, ಪೂರ್ವ ವಲಯದ ಸಂಯೋಜಕ ಅಧಿಕಾರಿ ತುಷಾರ್ ಗಿರಿನಾಥ್ ಹಾಗೂ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಒದಗಿಸಲು ಒತ್ತು ನೀಡಿ ಎಂದು ಸಚಿವ ಸೋಮಣ್ಣ ಈ ಸಂದರ್ಭದಲ್ಲಿ ಸೂಚಿಸಿದರು.

ಸಚಿವ ವಿ. ಸೋಮಣ್ಣ  ಸಭೆ
ಸಚಿವ ವಿ. ಸೋಮಣ್ಣ ಸಭೆ

ಸೋಂಕು ದೃಢಪಟ್ಟ ತಕ್ಷಣ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುತ್ತಿಲ್ಲ. ಬಿಯು (ಪೇಶೆಂಟ್ ಕೋಡ್) ಸಂಖ್ಯೆಗಾಗಿ ಒಂದೆರಡು ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಪೂರ್ವ ವಲಯದಲ್ಲಿ 44 ವಾರ್ಡ್​ಗಳಿದ್ದು, ಪ್ರತಿ ವಾರ್ಡ್​ಗೊಂದು ಫೀವರ್ ಕ್ಲಿನಿಕ್ ಸ್ಥಾಪಿಸಬೇಕು. ವಲಯದ ಆರು ವಿಧಾನಸಭಾ ಕ್ಷೇತ್ರಕ್ಕೆ ಒಂದೊಂದು ವಾರ್ ರೂಮ್​ ರಚಿಸಿ, ಅಲ್ಲಿಂದ ಅಧಿಕಾರಿ-ಸಿಬ್ಬಂದಿಗೆ ನಿರ್ದೇಶನ ನೀಡುವ ವ್ಯವಸ್ಥೆ ಮಾಡಿ ಎಂದು ಸಚಿವ ಸೋಮಣ್ಣ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.