ETV Bharat / state

ಆ.2 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ನೌಕರರ ಸಂಘ ನಿರ್ಧಾರ: ರೋಗಿಗಳಿಗೆ ಸಂಕಷ್ಟ - ಈಟಿವಿ ಭಾರತ್ ಕನ್ನಡ ಸುದ್ದಿ

ರಾಜ್ಯಾದ್ಯಂತ ಡಯಾಲಿಸಿಸ್​ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿ ನಗರದ ಫ್ರೀಡಂ ಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು
ಬೆಂಗಳೂರು
author img

By

Published : Jul 31, 2023, 11:04 PM IST

ಬೆಂಗಳೂರು : ಆಗಸ್ಟ್ 2 ರಿಂದ (ಬುಧವಾರ) ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಯಾಲಿಸಿಸ್ ಘಟಕದ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿರುವುದರಿಂದ ರಾಜ್ಯದ ಹಲವು ಜಿಲ್ಲಾಸ್ಪತ್ರೆಗಳಲ್ಲಿ ಡಯಾಲಿಸಿಸ್ ರೋಗಿಗಳು ತೀವ್ರ ಪರದಾಡುವಂತಹ ಪರಿಸ್ಥಿತಿ ಎದುರಾಗಲಿದೆ. ಪ್ರತಿಭಟನೆ ಹಿನ್ನೆಲೆ ಜಿಲ್ಲಾ ಕೇಂದ್ರಗಳಿಂದ ಡಯಾಲಿಸಿಸ್ ಘಟಕದ ಸಿಬ್ಬಂದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಡಯಾಲಿಸಿಸ್ ಮಾಡುವವರು ಇಲ್ಲದೆ ರೋಗಿಗಳು ನರಳುವಂತಾಗಲಿದೆ.

ಕಳೆದ ವರ್ಷ ಅಕ್ಟೋಬರ್​ನಲ್ಲಿ ನಡೆದಿದ್ದ ಪ್ರತಿಭಟನೆ : ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಆರ್‌ಎಸ್ ಮತ್ತು ಸಂಜೀವಿನಿ ಸಂಸ್ಥೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಡಯಾಲಿಸಿಸ್ ನೌಕರರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು.

ಕಳೆದ ತಿಂಗಳು ಕೂಡ ಪ್ರತಿಭಟನೆಗೆ ಮುಂದಾಗಿದ್ದ ಸಿಬ್ಬಂದಿ: ಈ ಹಿಂದೆ ಕೂಡ ರಾಜ್ಯಾದ್ಯಂತ ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಚಿಕಿತ್ಸೆ ಸ್ಥಗಿತಗೊಳ್ಳುವ ಆತಂಕ ತಾತ್ಕಾಲಿಕವಾಗಿ ದೂರವಾಗಿತ್ತು. ಡಯಾಲಿಸಿಸ್‌ ಹೊಣೆ ಹೊತ್ತ ಸಂಜೀವಿನಿ ಸಂಸ್ಥೆಯ ಸಿಬ್ಬಂದಿ ಸರ್ಕಾರದ ಸಕಾಲಿಕ ಮಧ್ಯಪ್ರವೇಶದಿಂದ ಜೂನ್. 26ರಿಂದ ಪ್ರತಿಭಟನೆಗೆ ಮುಂದಾದವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುವವರಿಗೆ ಡಯಾಲಿಸಿಸ್: ಮೂತ್ರಪಿಂಡ ಸಮಸ್ಯೆಯಿಂದ ಬಳಲುವವರಿಗೆ ಸರ್ಕಾರಿ ಆಸ್ಪತ್ರೆಗಳ ಡಯಾಲಿಸಿಸ್ ಚಿಕಿತ್ಸೆ ಆಪ್ತವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿಯಾಗುತ್ತದೆ. ವಾರಕ್ಕೆರಡು ಬಾರಿ ಚಿಕಿತ್ಸೆ ಅನಿವಾರ್ಯ ಆದ ಕಾರಣ ಹಣದ ಹೊರೆಯಾಗಲಿದೆ. ಖಾಸಗಿಯಲ್ಲೂ ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ಲಭ್ಯವಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಹ ಸೀಮಿತ ರೋಗಿಗಳಿಗೆ ವ್ಯವಸ್ಥೆ ಇದೆ. ಇದನ್ನು ಹೆಚ್ಚುಗೊಳಿಸಲು ನಿರಂತರ ಬೇಡಿಕೆಯಿದೆ. ಆಯುಷ್ಮಾನ್ ಭಾರತದ ಮೂಲಕ ಡಯಾಲಿಸಿಸ್ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದರೆ ಸಾರ್ವಜನಿಕರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಾಯಾಸವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಭರವಸೆ ಈಡೇರಿಸಿಲ್ಲ: ಸಿಬ್ಬಂದಿಗಳಿಗೆ ಅನಾರೋಗ್ಯ ಸಮಯದಲ್ಲಿ ಇಎಸ್‌ಐ ಇಲ್ಲದೇ, ಹಣಹೊಂದಿಸಲಾಗದೇ ಮೃತಪಟ್ಟ ಘಟನೆಗಳೂ ನಡೆದಿವೆ. ಸಿಗಬೇಕಾದ ವೇತನಕ್ಕಾಗಿ ಕೊಟ್ಟಿರುವ ಭರವಸೆ ಪತ್ರ ಹಿಡಿದು ಹಲವಾರು ಬಾರಿ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದ್ದರೂ ಪ್ರಯೋಜನವಿಲ್ಲದಾಗಿದೆ ಎಂದು ರಾಜ್ಯ ಡಯಾಲಿಸಿಸ್ ನೌಕರರ ಸಂಘದ ಅಧ್ಯಕ್ಷ ಎಸ್ ಕೆ ಚೇತನ್ ಹೇಳಿದ್ದಾರೆ.

ಪ್ರತಿಭಟನೆ ನಡೆಸದಂತೆ ಮನವಿ: ಏಜೆನ್ಸಿಗಳು ಮತ್ತು ಸಿಬ್ಬಂದಿಗಳೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ಮುಷ್ಕರ ನಡೆಸದಂತೆ ಮನವಿ ಮಾಡಿದ್ದಾರೆ. ಏಜೆನ್ಸಿ ಗುತ್ತಿಗೆ ಅವಧಿ ಮುಗಿದ ಕಾರಣ ಪಾವತಿಯಲ್ಲಿ ಸಮಸ್ಯೆಯಾಗಿದೆ. ಸಂಜೀವಿನಿ ಸಂಸ್ಥೆ ಹಾಗೂ ಸಿಎಂ ಜೊತೆ ಮಾತುಕತೆ ನಡೆದಿದೆ. ಮತ್ತೆ ಶೀಘ್ರದಲ್ಲಿ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೇವೆ. ಸಿಬ್ಬಂದಿ ಮುಷ್ಕರ ನಡೆಸದೇ ಕಾರ್ಯನಿರ್ವಹಣೆ ನಡೆಸಲು ಮನವಿ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಜನ ಬರಬೇಕೋ ಬೇಡ್ವೋ: ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸುವಂತೆ ಸಿಎಂ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.