ETV Bharat / state

ಪಟ್ಟಣಗೆರೆ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ: 12 ವಾರಗಳಲ್ಲಿ ತೆರವಿಗೆ ಹೈಕೋರ್ಟ್ ಆದೇಶ

author img

By ETV Bharat Karnataka Team

Published : Oct 25, 2023, 3:57 PM IST

ಕೆಂಗೇರಿ ಹೋಬಳಿಯ ಪಟ್ಟಣಗೆರೆ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿಯನ್ನು ಹನ್ನೆರಡು ವಾರಗಳಲ್ಲಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ನಗರದ ಕೆಂಗೇರಿ ಹೋಬಳಿಯ ಪಟ್ಟಣಗೆರೆ ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಿಸಿರುವ ಸರ್ಕಾರಿ ಜಮೀನನ್ನು ಮುಂದಿನ 12 ವಾರಗಳಲ್ಲಿ ತೆರವುಗೊಳಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಿಳಿಸಿದೆ. ಪಟ್ಟಣಗೆರೆ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿಯನ್ನು ತೆರವುಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಬಿ.ಎನ್.ನಾಗರಾಜು ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಆದೇಶದ ಪ್ರತಿ ಸಿಕ್ಕ ಹನ್ನೆರಡು ವಾರಗಳೊಳಗಾಗಿ ಒತ್ತುವರಿಯಾಗಿರುವ ಸರ್ಕಾರಿ ಜಮೀನು ತೆರವುಗೊಳಿಸಬೇಕು. ಈ ಸಂಬಂಧದ ವರದಿಯನ್ನು ವಿಶೇಷ ಆಯುಕ್ತರು ಹಾಗೂ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಸಲ್ಲಿಸಬೇಕು ಎಂದು ಹೇಳಿದೆ. ಈ ಪ್ರಕ್ರಿಯೆಯಲ್ಲಿ ಎದುರಾಗುವ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸಲು ಪೊಲೀಸ್ ಇಲಾಖೆಯ ನೆರವು ಪಡೆದುಕೊಳ್ಳಬಹುದು. ಇದಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರಗಳು ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರರು ಮಾಹಿತಿ ಹಕ್ಕು ಕಾಯಿದೆಯಡಿ ಲಭ್ಯವಾಗಿದ್ದ ದಾಖಲೆಗಳಲ್ಲಿ ಪಟ್ಟಣಗೆರೆ ಗ್ರಾಮದಲ್ಲಿ 1.9 ಎಕರೆ ಒತ್ತುವರಿಯಾಗಿರುವ ಅಂಶ ಬೆಳಕಿಗೆ ಬಂದಿತ್ತು. ಈ ಕುರಿತಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಈ ಸಂಬಂಧ ತನಿಖೆಗೆ ಆದೇಶಿಸಿತ್ತು. ಅದರಂತೆ ವಿಶೇಷ ಆಯುಕ್ತರು ತನಿಖೆ ನಡೆಸಿದ್ದರು. ಪಟ್ಟಣಗೆರೆ ಗ್ರಾಮದ ಸರ್ವೇ ನಂಬರ್ 10 ರಲ್ಲಿ 1.9 ಎಕರೆ ಭೂಮಿಯನ್ನು ಮಂಚಯ್ಯ ಎಂಬುವರು ಒತ್ತುವರಿ ಮಾಡಿಕೊಂಡಿದ್ದು, ಜಮೀನಿನಲ್ಲಿ ನಿವೇಶನಗಳನ್ನಾಗಿ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡಿದ್ದಾರೆ. ಆದ್ದರಿಂದ ಈ ಜಮೀನನ್ನು ತಕ್ಷಣ ವಶಕ್ಕೆ ಪಡೆದುಕೊಳ್ಳಬೇಕು ಎಂದು ವಿಶೇಷ ತಹಶೀಲ್ದಾರ್ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದರು.

ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿರಲಿಲ್ಲ ಎಂದು ಈ ಹಿಂದೆ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದ್ದರು. ಇದೀಗ ಮುಂದಿನ 12 ವಾರದ ಒಳಗಾಗಿ ಎಲ್ಲ ಒತ್ತುವರಿಯನ್ನು ತೆರವುಗೊಳಿಸಿ ವರದಿ ಸಲ್ಲಿಸಲು ನ್ಯಾಯಪೀಠ ಸೂಚನೆ ನೀಡಿ ಆದೇಶಿಸಿತು.

ಇದನ್ನೂ ಓದಿ: ನ್ಯಾಯಾಲಯದ ಆದೇಶವಿದ್ದರೂ, ಪತಿಯೊಂದಿಗೆ ಬಾರದ ಪತ್ನಿ: ವಿಚ್ಛೇದನಕ್ಕೆ ಆಧಾರ- ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.