ETV Bharat / state

ಉಪನ್ಯಾಸಕರ ಆರ್ಥಿಕ‌ ನಷ್ಟ ಪರಿಹರಿಸಲು ವೇತನ ಆಯೋಗ ಶಿಫಾರಸು ಜಾರಿಗೊಳಿಸಿ : ಹೆಚ್​ಡಿಡಿ - ಹೆಚ್.ಡಿ.ದೇವೇಗೌಡ

ಸೇವಾ ಜೇಷ್ಠತೆ ಮತ್ತು ವಿದ್ಯಾರ್ಹತೆ ಆಧಾರದ ಮೇಲೆ ಭಡ್ತಿ ಹೊಂದಿದ ಸಹಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ತಮ್ಮ ಜೊತೆಯಲ್ಲಿ ಸಮಾನ ವೃಂದದ ಸೇವೆಗೆ ಸೇರಿದ ಭಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ಮೂಲ ವೇತನ ಹೊಂದಿರುವುದು ಸರಿಯಾದ ಕ್ರಮವಲ್ಲ..

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ರ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ರ
author img

By

Published : Aug 30, 2020, 2:41 PM IST

ಬೆಂಗಳೂರು: ಭಡ್ತಿ ಹೊಂದಿದ ಸಹಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಒತ್ತಾಯಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ರ
ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಪತ್ರ

ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಸೇವಾ ಜೇಷ್ಠತೆ ಮತ್ತು ವಿದ್ಯಾರ್ಹತೆ ಆಧಾರದ ಮೇಲೆ ಭಡ್ತಿ ಹೊಂದಿದ ಸಹಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ತಮ್ಮ ಜೊತೆಯಲ್ಲಿ ಸಮಾನ ವೃಂದದ ಸೇವೆಗೆ ಸೇರಿದ ಭಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ಮೂಲ ವೇತನ ಹೊಂದಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಆರ್ಥಿಕ ಅನ್ಯಾಯಕ್ಕೆ ಒಳಗಾಗುವ ಭಡ್ತಿ, ಸಹ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿ ತಾರತಮ್ಯ ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ವರದಿಯಲ್ಲಿ ಸ್ಪಷ್ಟವಾಗಿ ಶಿಫಾರಸು ಮಾಡಲಾಗಿದೆ. ಈ ಶಿಫಾರಸನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ಭಡ್ತಿ ಉಪನ್ಯಾಕರು ಮತ್ತು ಸಹ ಶಿಕ್ಷಕರ ಜ್ವಲಂತ ಸಮಸ್ಯೆ ನಿವಾರಿಸಲು ಕ್ರಮವಹಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.