ETV Bharat / state

ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್​​, ವೈದ್ಯಕೀಯ ವಿಷಯಗಳ ಬೋಧನಾ ಪಠ್ಯಕ್ರಮ ರಚನೆ : ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ

ಪ್ರಪಚಂದ ಯಾವುದೇ ಭಾಷೆಗಳಿಗೂ ಪ್ರಬುದ್ಧತೆಯಲ್ಲಿ ಸರಿಸಾಟಿಯಾದ ಕನ್ನಡ ಭಾಷೆಯಲ್ಲಿಯೇ ತಾಂತ್ರಿಕ ವಿಷಯಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಷಯಗಳ ಪಠ್ಯಕ್ರಮಗಳು ಆಗಬೇಕು. ಈ ನಿಟ್ಟಿನಲ್ಲಿ ಸಾಹಿತಿಗಳು ಮತ್ತು ಚಿಂತಕರು ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಕೋರಿದ ಗೃಹ ಸಚಿವರು..

Minister Araga jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Nov 24, 2021, 7:23 PM IST

ಬೆಂಗಳೂರು : ಕನ್ನಡ ಅತ್ಯಂತ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಗಳಲ್ಲಿ ಪ್ರಮುಖವಾಗಿದೆ. ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಷಯಗಳನ್ನು ಸರಳವಾಗಿ ಮತ್ತು ಸುಲಲಿತವಾಗಿ ವಿದ್ಯಾರ್ಥಿಗಳಿಗೆ ಬೋಧಿಸಲು ನೆರವಾಗುವಂತೆ ಪಠ್ಯಕ್ರಮಗಳ ರಚನೆಯ ಅಗತ್ಯವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮ

ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್​​​​ನಲ್ಲಿ ಸಾಹಿತಿ ಮತ್ತು ಸಂಶೋಧಕ ಹಂಪ ನಾಗರಾಜಯ್ಯ ರಚಿಸಿದ 'ಚಾರುಲತ-ವಸಂತ' ಎಂಬ ಕಾವ್ಯ ಕಥನದ ಇಂಗ್ಲಿಷ್ ಅನುವಾದ ಕೃತಿಯನ್ನು ಗೃಹ ಸಚಿವರು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಹಂಪ ನಾಗರಾಜಯ್ಯನವರು ರಚಿಸಿರುವ ಚಾರುಲತಾ-ವಸಂತ ಕೃತಿ ಕನ್ನಡದಲ್ಲಿ ರಚಿತವಾದ ಸುಂದರ ಕಥನಾ ಕಾವ್ಯವಾಗಿದ್ದು, ಇಂತಹ ಕೃತಿಯನ್ನ ಮೂಲ ಕೃತಿಗೆ ಧಕ್ಕೆ ಬಾರದಂತೆ ತರ್ಜುಮೆ ಮಾಡಲಾಗಿದೆ ಎಂದರು.

ಪ್ರಪಚಂದ ಯಾವುದೇ ಭಾಷೆಗಳಿಗೂ ಪ್ರಬುದ್ಧತೆಯಲ್ಲಿ ಸರಿಸಾಟಿಯಾದ ಕನ್ನಡ ಭಾಷೆಯಲ್ಲಿಯೇ ತಾಂತ್ರಿಕ ವಿಷಯಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಷಯಗಳ ಪಠ್ಯಕ್ರಮಗಳು ಆಗಬೇಕು. ಈ ನಿಟ್ಟಿನಲ್ಲಿ ಸಾಹಿತಿಗಳು ಮತ್ತು ಚಿಂತಕರು ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಕೋರಿದರು.

ಕನ್ನಡ ಭಾಷೆಯಲ್ಲಿ ರಚಿತವಾದ ಅತ್ಯುತ್ತಮ ಕೃತಿಗಳನ್ನು ಬೇರೆ ಭಾಷೆಗೆ ಅನುವಾದಗೊಳಿಸಲು ಅಡ್ಡಿಯಾಗಿರುವ 'ಲೇಖಕರ ಹಕ್ಕು' ಸಂಬಂಧ ಇರುವ ಸಮಸ್ಯೆಗಳನ್ನು ಪರಿಹರಿಸಲು ಭರವಸೆ ನೀಡಿದರು. ಕನ್ನಡ ಭಾಷೆಯಲ್ಲಿ ರಚಿತವಾಗುವ ಎಲ್ಲಾ ಮೌಲ್ಯಯುತ ಕೃತಿಗಳು ನಾಡಿನ ಆಸ್ತಿಯಾಗಿವೆ. ಕನ್ನಡ ಹಾಗೂ ಸಾರಸ್ವತ ಲೋಕಕ್ಕೆ ನೀಡುವ ಕೊಡುಗೆಗಳಾಗಿವೆ ಎಂದರು.

ಇದೇ ವೇಳೆ ಕೃತಿ ರಚನೆಕಾರ ಹಂಪ ನಾಗರಾಜಯ್ಯ ಮತ್ತು ಅವರ ಪತ್ನಿಯನ್ನು ಸಚಿವರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಲೇಖಕ ಹಾಗೂ ಸಾಹಿತಿ ಹೆಚ್.ಎಸ್.ವೆಂಕಟೇಶ್​​ ಮೂರ್ತಿ, ಗುರುರಾಜ ಕರ್ಜಗಿ ಹಾಗೂ ಇತರ ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ: Covid Report : ರಾಜ್ಯದಲ್ಲಿಂದು 254 ಮಂದಿ ಪಾಸಿಟಿವ್‌, ಸೋಂಕಿನಿಂದ ಮೂವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.