ETV Bharat / state

'ಮುಂದಿನ ವರ್ಷ ಇಂಜಿನಿಯರಿಂಗ್​ ಕಾಲೇಜು ಕಟ್ಟಡ ಕಾಮಗಾರಿ ಆರಂಭ' - Engineering college work at Chikkamagalu

ಚಿಕ್ಕಮಗಳೂರಿನಲ್ಲಿ ಮುಂದಿನ ವರ್ಷದಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸಭೆ

author img

By

Published : Aug 5, 2020, 9:57 PM IST

ಬೆಂಗಳೂರು: ಚಿಕ್ಕಮಗಳೂರು ನಗರದಲ್ಲಿ ಮುಂದಿನ ವರ್ಷದಿಂದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ತೆಗೆದುಕೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ/ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, 2012ರಲ್ಲೇ ಚಿಕ್ಕಮಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ತಿರ್ಮಾನಿಸಲಾಗಿತ್ತು. ಈ ಯೋಜನೆಗೆ 26 ಕೋಟಿ ರೂಪಾಯಿ ನೀಡುವಂತೆ ನಬಾರ್ಡ್​ಗೂ ಮನವಿ ಸಲ್ಲಿಸಲಾಗಿತ್ತು. ನಂತರ ನಬಾರ್ಡ್ ಅನುಮೋದನೆ ನೀಡಿರಲಿಲ್ಲ. ಇದರ ನಂತರ ರೂಸಾ ಯೋಜನೆಯಡಿ ಹಣ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಿದಾಗಲೂ ಒಪ್ಪಿಗೆ ಸಿಕ್ಕಿರಲಿಲ್ಲ. ಇದನ್ನು ಸದ್ಯ 58 ಕೋಟಿ ರೂಪಾಯಿಗೆ ಪರಿಷ್ಕರಿಸಿದ್ದು, ಇದಕ್ಕೆ ಒಪ್ಪಿಗೆ ನೀಡಬೇಕು ಎಂದು ಸಚಿವ ರವಿ ಅವರು ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ಹಣದ ಕೊರತೆ ಇರುವ ಕಾರಣ ಮುಂದಿನ ವರ್ಷ ಕೈಗೆತ್ತಿಕೊಳ್ಳಲಾಗುವುದು. ಈ ನಡುವೆ ಕೇಂದ್ರ ಸರ್ಕಾರದಿಂದಲೂ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಡಿಸಿಎಂ ಹೇಳಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸಭೆ
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಭೆ

ಜಿಟಿಟಿಸಿಗೆ ಆದ್ಯತೆ:

ಚಿಕ್ಕಮಗಳೂರಿನಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆ (ಜಿಟಿಟಿಸಿ)ಗೆ ನಾಲ್ಕು ಎಕರೆ ಜಾಗ ಮೀಸಲಿದ್ದು, ತಕ್ಷಣ ಅದನ್ನು ಆರಂಭಿಸಬೇಕು ಎನ್ನುವ ಮನವಿಗೆ ಪರಿಶೀಲಿಸುವ ಭರವಸೆಯನ್ನು ಡಿಸಿಎಂ ನೀಡಿದರು. ಒಂದು ಜಿಟಿಟಿಸಿ ಸಂಸ್ಥೆ ಸ್ಥಾಪಿಸಲು 40 ಕೋಟಿ ರೂಪಾಯಿ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇದನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

ಕುವೆಂಪು ವಿವಿ ಕ್ಯಾಂಪಸ್:

ಕುವೆಂಪು ವಿವಿಯ ಕ್ಯಾಂಪಸ್ ನಿರ್ಮಾಣಕ್ಕೆ ತಕ್ಷಣ ಚಾಲನೆ ನೀಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ವಿವಿ ಕುಲಪತಿ ಡಾ. ವೀರಭದ್ರಪ್ಪ ಅವರಿಗೆ ಸೂಚಿಸಿದರು. ಒಟ್ಟು 378 ಕೋಟಿ ರೂಪಾಯಿ ಅಂದಾಜು ವೆಚ್ಚದ ಕಾಮಗಾರಿಗೆ ವಿಶ್ವವಿದ್ಯಾಲಯ ಯೋಜನೆ ರೂಪಿಸಿದೆ. ಸರ್ಕಾರದಿಂದ ಹಣಕಾಸಿನ ನೆರವು ಕೊಡಿಸುವಂತೆ ಕೋರಿದರು. ಆದರೆ ಡಿಸಿಎಂ ಅವರು ವಿಶ್ವವಿದ್ಯಾಲಯದಿಂದಲೇ ಹಣ ಭರಿಸಬೇಕು ಎಂದು ಸೂಚಿಸಿದರು. ಹಂತ ಹಂತವಾಗಿ ಕಾಮಗಾರಿ ಆರಂಭಿಸಬೇಕು ಎಂದು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.