ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಸ್ಎಸ್ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಹಾಸ್ಟೆಲ್ನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಶಿವಾನಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಇಂದು ಪರೀಕ್ಷೆಗೆ ಹಾಜರಾಗದೇ ಇದ್ದಿದ್ದರಿಂದ ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ಪರಿಶೀಲಿಸಿದಾಗ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಕೆಂಗೇರಿ ಪೊಲೀಸರಿಗೆ ಕಾಲೇಜು ಮಂಡಳಿ ಮಾಹಿತಿ ನೀಡಿದ್ದು, ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅವಾಚ್ಯವಾಗಿ ಬೈದನೆಂದು ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ : ಸಿಮ್ಸ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ