ETV Bharat / state

ವಿದ್ಯುತ್ ದರ ಹೆಚ್ಚಳ ಕೋರಿ KERCಗೆ ಎಸ್ಕಾಂಗಳ ಪ್ರಸ್ತಾವನೆ

author img

By ETV Bharat Karnataka Team

Published : Jan 4, 2024, 10:35 PM IST

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಬಹುದಾಗಿದೆ.

ವಿದ್ಯುತ್ ದರ ಹೆಚ್ಚಳ
ವಿದ್ಯುತ್ ದರ ಹೆಚ್ಚಳ

ಬೆಂಗಳೂರು : ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಬೆಸ್ಕಾಂ ಸೇರಿ ಇತರೆ ಕಂಪನಿಗಳು ವಿದ್ಯುತ್ ದರ ಏರಿಸುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್​ಸಿ) ಮುಂದೆ ಪ್ರಸ್ತಾವನೆ ಸಲ್ಲಿಸಿವೆ.

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ದಿನ ನಿತ್ಯ ಉಪಯೋಗಿಸುವ ದವಸ ಧಾನ್ಯ, ಪೆಟ್ರೋಲ್, ಡಿಸೇಲ್ ಗ್ಯಾಸ್, ಹಾಲು-ಮೊಸರಿನ ಬೆಲೆ ಗಗನಕ್ಕೇರಿದೆ‌. ಇದರ ನಡುವೆ ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ ಕಾದಿದೆ ಎನ್ನಲಾಗುತ್ತಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚ ಸರಿದೂಗಿಸಲು ಬೆಲೆ ಏರಿಕೆ ಮಾಡೋಕೆ ಹೊರಟಿದೆ. ಅದ್ದರಿಂದ ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದೆ. ಅದ್ದರಿಂದ ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದ ಕೆಇಆರ್​ಸಿ ಇದೀಗ ಮತ್ತೆ ವಿದ್ಯುತ್ ದರ ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ಜನವರಿ ತಿಂಗಳಿನಲ್ಲಿಯೇ ಪ್ರತಿ ಯೂನಿಟ್​ಗೆ ಇಂತಿಷ್ಟು ವಿದ್ಯುತ್ ದರ ಹೆಚ್ಚಳ ಮಾಡಿ ಎಂದು ಎಸ್ಕಾಂಗಳು ಪ್ರಸ್ತಾಪ ಇಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬೆಸ್ಕಾಂ ಸೇರಿ ಇತರೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್​ಗೆ 49 ರಿಂದ 60 ಪೈಸೆಯವರಿಗೂ ವಿದ್ಯುತ್ ದರ ಏರಿಸುವಂತೆ ಬೇಡಿಕೆ ಇಟ್ಟಿವೆ. ಈ ಬಾರಿ ಜನರಿಗೆ ಸಮಸ್ಯೆ ಆಗದಂತೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ಇದನ್ನೂ ಓದಿ : ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ವರದಿ ಸಲ್ಲಿಕೆಗೆ ಸಮಿತಿ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.