ETV Bharat / state

ಲಸಿಕೆ ಪಡೆಯಲು ಆಧಾರ್ ನೋಂದಣಿ: ಗ್ರಾಮಗಳಲ್ಲಿ 630 ಆಧಾರ್ ಕೇಂದ್ರ ಸ್ಥಾಪಿಸಲು ನಿರ್ಧಾರ

ಗ್ರಾಮೀಣ ಪ್ರದೇಶದಲ್ಲಿನ ನಿವಾಸಿಗಳು ಆಧಾರ್​ನಲ್ಲಿ ಮೊಬೈಲ್ ನಂಬರ್ ಅಪ್ಡೇಟ್ ಮಾಡಲು ಅನುವಾಗುವಂತೆ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

Bangalore
ಬೆಂಗಳೂರು
author img

By

Published : Jul 8, 2021, 3:06 PM IST

ಬೆಂಗಳೂರು: ಕೋವಿಡ್ ಲಸಿಕೆಯನ್ನು ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಮೊದಲ ಹಂತದಲ್ಲಿ 630 ಆಧಾರ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು, ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನಿವಾಸಿಗಳು ಮೊಬೈಲ್ ಸಂಖ್ಯೆಯನ್ನು ಆಧಾರ್​ಗೆ ಅಪ್ಡೇಟ್ ಮಾಡಲು ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ, ಗ್ರಾಮೀಣ ಪ್ರದೇಶದಲ್ಲಿನ ನಿವಾಸಿಗಳು ಆಧಾರ್​ನಲ್ಲಿ ಮೊಬೈಲ್ ನಂಬರ್ ಅಪ್ಡೇಟ್ ಮಾಡಲು ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ 630 ಟ್ಯಾಬ್ಲೆಟ್‌​ಗಳನ್ನು ರಾಜ್ಯದ 28 ಜಿಲ್ಲಾ ಪಂಚಾಯತಿಗಳ 22 ಗ್ರಾಮ ಪಂಚಾಯತಿಗಳಿಗೆ ಒದಗಿಸಿ, ಗ್ರಾಮೀಣ ಪ್ರದೇಶದಲ್ಲಿನ ನಿವಾಸಿಗಳ ಆಧಾರ್​ನಲ್ಲಿ ಮೊಬೈಲ್ ನಂಬರ್​​ ಅಪ್ಡೇಟ್ ಮಾಡುವ ಸಲುವಾಗಿ ಆಧಾರ್ ತಿದ್ದುಪಡಿ ಮತ್ತು ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.

ಆಧಾರ್​​ನಲ್ಲಿ ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಲು ಸಾರ್ವಜನಿಕರಿಂದ 50 ರೂ. ಶುಲ್ಕ ವಿಧಿಸಬೇಕು. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ನೋಂದಣಿ ಮಾಡಲು ಸಾರ್ವಜನಿಕರಿಂದ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂದು ಸೂಚಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ: ಸಿಎಂ ಬಿಎಸ್​ವೈಗೆ ಬಿಗ್​ ರಿಲೀಫ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.