ETV Bharat / state

ಐಟಿ ದಾಳಿ ರಾಜಕೀಯ ಪ್ರೇರಿತ, ಸಿಎಂ ಆರೋಪಕ್ಕೆ ತಿರುಗೇಟುಕೊಟ್ಟ ಬಿಎಸ್​​ವೈ - BS Yeddyurappa

ಲೋಕಸಭಾ ಚುನಾವಣೆಯ ಹಿನ್ನೆಲೆ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ್ದು, ರಾಜಕೀಯ ಪ್ರೇರಿತ ಎಂದು ಆರೋಪ ಮಾಡಿದ್ದ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ.

ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ
author img

By

Published : Mar 28, 2019, 12:15 PM IST

ಬೆಂಗಳೂರು: ಐಟಿ ದಾಳಿ ರಾಜಕೀಯ ಪ್ರೇರಿತ ಅನ್ನೋದ್ರಲ್ಲಿ ಅರ್ಥವಿಲ್ಲ. ಪ್ರಾಮಾಣಿಕವಾಗಿ ಅವರು ಅವರ ಕೆಲಸವನ್ನು ಮಾಡುತ್ತಾರೆ. ಅನುಮಾನ ಬಂದಾಗ ಐಟಿ ದಾಳಿ ಸಹಜ ಎಂದು ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪಅಭಿಪ್ರಾಯಪಟ್ಟಿದ್ದಾರೆ.

ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

ಪ್ರಮುಖ ಜನಪ್ರತಿನಿಧಿಗಳು, ಅಧಿಕಾರಿಗಳ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದ ಬಳಿ ಪ್ರತಿಕ್ರಿಯೆ ನೀಡಿದ ಅವರು, ಐಟಿ ಅಧಿಕಾರಿಗಳಿಗೆ ಅನುಮಾನ ಬಂದ್ರೆ ಅವರೇ ನೇರವಾಗಿ ದಾಳಿ ಮಾಡಿ ತನಿಖೆ ಮಾಡುತ್ತಾರೆ. ಇವರು ಪ್ರಾಮಾಣಿಕರಿದ್ದರೆ ಇವರಿಗೇಕೆ ಭಯ? ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿದೆ. ನಿನ್ನೆ ರಾತ್ರಿಯೇ ಅವರಿಗೆ ಐಟಿ ದಾಳಿಯ ಮಾಹಿತಿ ಇತ್ತು ಅನ್ನೋದಾದರೆ ಅವರು ಮೊದಲೇ ಬಂದೋಬಸ್ತ್ ಮಾಡಿಕೊಂಡಿದ್ದಾರೆ ಅನ್ನೋ ಅನುಮಾನವಿದೆ. ಸುಖಾಸುಮ್ಮನೆ ಸಿಬಿಐ, ಐಟಿ ಮೇಲೆ ಆರೋಪ ಮಾಡೋದು ಒಂದು ಖಯಾಲಿ ಆಗಿಬಿಟ್ಟಿದೆ. ಅಲ್ಲದೇ ಐಟಿ ದಾಳಿಗೆ ಸುಮಲತಾ ಅಂಬರೀಶ್​ ಕಾರಣ ಎಂಬ ಹೇಳಿಕೆ ನೀಡಿದ ಪುಟ್ಟರಾಜುಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.