ETV Bharat / state

ಶ್ರೀಕಿಗೆ ರಕ್ಷಣೆ ಕೊಡುವ ವಿಚಾರದಲ್ಲಿ ಸರ್ಕಾರಕ್ಕಿಂತಲೂ ಕಾಂಗ್ರೆಸ್‌ನಲ್ಲೇ ಹೆಚ್ಚು ಜನ ಇದ್ದಾರೆ : ಹೆಚ್​​ಡಿಕೆ - bitcoin scam accuse sriki news

ಬಿಟ್ ಕಾಯಿನ್ ಹಗರಣ(bitcoin scam) ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನಿಗೆ ಸರ್ಕಾರಕ್ಕಿಂತ ಕಾಂಗ್ರೆಸ್​ನವರೇ ಹೆಚ್ಚಿನ ರಕ್ಷಣೆ ನೀಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ(ex cm HD Kumaraswamy) ಆರೋಪಿಸಿದ್ದಾರೆ..

Ex cm Hd Kumaraswamy outrage against congress over bitcoin scam
ಜನತಾ ಸಂಗಮ ಕಾರ್ಯಕ್ರಮದಲ್ಲಿ ಹೆಚ್​ಡಿಕೆ ಮಾತು
author img

By

Published : Nov 16, 2021, 3:30 PM IST

ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ(bitcoin scam)ಸಂಬಂಧಿಸಿದಂತೆ ಆರೋಪಿ ಶ್ರೀಕೃಷ್ಣನಿಗೆ ರಕ್ಷಣೆ ಕೊಡುವ ವಿಚಾರದಲ್ಲಿ ಸರ್ಕಾರಕ್ಕಿಂತಲೂ ಕಾಂಗ್ರೆಸ್​​ನಲ್ಲೇ(congress) ಹೆಚ್ಚು ಜನ ಇದ್ದಾರೆ.

ಸರ್ಕಾರದ ಮೇಲೆ ಕಾಂಗ್ರೆಸ್​​ಗೆ ನಂಬಿಕೆ ಇಲ್ವೇನೋ?ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ(ex cm HD Kumaraswamy) ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಜನತಾ ಸಂಗಮ ಕಾರ್ಯಕ್ರಮದಲ್ಲಿ ಹೆಚ್​ಡಿಕೆ ಮಾತು

ಶ್ರೀಕಿಗೆ ಸರ್ಕಾರಕ್ಕಿಂತಲೂ ಕಾಂಗ್ರೆಸ್​ನವರೇ ಹೆಚ್ಚು ರಕ್ಷಣೆ : ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಾಗಾರ 'ಜನತಾ ಸಂಗಮ'ದ ವೇಳೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದಿನ ಮಂತ್ರಿಯೊಬ್ಬರ ಸಿಡಿ ಕೇಸ್​​ನಲ್ಲಿ ಕಾಂಗ್ರೆಸ್​​ನವರೇ ಹೆಚ್ಚು ರಕ್ಷಣೆ ಕೊಟ್ಟ ಉದಾಹರಣೆ ಇದೆ.‌ ಹಾಗಾಗಿ, ಶ್ರೀಕಿಗೆ ಸರ್ಕಾರಕ್ಕಿಂತಲೂ ಕಾಂಗ್ರೆಸ್​ನವರೇ ಹೆಚ್ಚು ರಕ್ಷಣೆ ಕೊಡ್ತಾರೆ ಎಂದು ಟೀಕಿಸಿದರು.

ಬಿಟ್ ಕಾಯಿನ್ ಬರೀ ಗೊಂದಲ : ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ.

ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.

ಆರೋಪಿ ಶ್ರೀಕಿ(sriki)ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯ ಮಾಡಿದ್ದರಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ.

ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು? ಎಂದರು.

ನನ್ನ ಗ್ರಾಮ ವಾಸ್ತವ್ಯಕ್ಕೆ ಗಾಂಧಿ ಸ್ಫೂರ್ತಿ : ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ, ಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದು ಎಂದು ತಿರುಗೇಟು ನೀಡಿದರು.

ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹಂಸಲೇಖ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಇವತ್ತು ಪುನೀತ್ ನಮನ ಕಾರ್ಯಕ್ರಮಕ್ಕೆ ನಾನು ಹೋಗಲು ಆಗುವುದಿಲ್ಲ. ಬೇರೆ ಕಾರ್ಯಕ್ರಮ ಇದೆ. ಮುಂದಿನ ಸಲ ಪುನೀತ್ ಅವರ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳುತ್ತೇನೆ ಎಂದರು. ಮುಂದಿನ ಪಾಲಿಕೆ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ನಗರದಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ.

ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷವು ಅನೇಕ ಅಭಿವೃದ್ಧಿ ಯೋಜನೆಗಳನ್ನು ನೀಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ಏನಿದೆ ಎಂಬ ಬಗ್ಗೆಯೂ ಇಂದಿನ ಕಾರ್ಯಾಗಾರದಲ್ಲಿ ಚರ್ಚೆ ನಡೆಸಲಾಗುವುದು. ಜತೆಗೆ, ಪಕ್ಷದ ಸಂಘಟನೆಯಲ್ಲಿ ಎಲ್ಲೆಲ್ಲಿ ಲೋಪ ಆಗಿದೆ ಎನ್ನುವುದನ್ನು ಚರ್ಚೆ ಮಾಡಿ ಸರಿಪಡಿಸಲಾಗುವುದು ಎಂದು ಅವರು ಹೇಳಿದರು.

ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ ಬಿಟಿ, ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ನಗರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾಗ್ಯೂ ಆ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ಇಲ್ಲ. ಪಕ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸ ಮಾಡುವ ವಿಚಾರವಾಗಿ ಕಾರ್ಯಾಗಾರದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದರು.

ಬಿಬಿಎಂಪಿ ಚುನಾವಣೆಗೆ ತಯಾರಿ : ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ, ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ.

ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ ಎಂದು ಹೆಚ್​​ಡಿಕೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆ ಮಾತನ್ನು ಈಗಾಗಲೇ ಹೇಳಿದ್ದೇವೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.