ETV Bharat / state

Bitcoin Scam: ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ- ಹೆಚ್​ಡಿಕೆ - ಪರಿಷತ್​ ಚುನಾವಣೆಗೆ ಸೂರಜ್​ ರೇವಣ್ಣ ಸ್ಪರ್ಧೆ ವಿಚಾರಕ್ಕೆ ಹೆಚ್​ಡಿಕೆ ಪ್ರತಿಕ್ರಿಯೆ

ಕಾಂಗ್ರೆಸ್ ಸರ್ಕಾರದಲ್ಲಿ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಬಿಟ್​ಕಾಯಿನ್ (Bitcoin)​ ಹಗರಣದ ಆರೋಪಿ ಶ್ರೀಕೃಷ್ಣ ಜಾಮೀನಿನ ಮೇಲೆ ಹೊರಬಂದಿರುವ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಪ್ರತಿಕ್ರಿಯಿಸಿದ್ದಾರೆ.

EX cm HD Kumaraswamy reaction over bitcoin issue
ಬಿಟ್​ಕಾಯಿನ್​ ವಿಚಾರಕ್ಕೆ ಹೆಚ್​ಡಿಕೆ ಪ್ರತಿಕ್ರಿಯೆ
author img

By

Published : Nov 11, 2021, 5:18 PM IST

Updated : Nov 11, 2021, 7:13 PM IST

ಬೆಂಗಳೂರು:ಬಿಟ್ ಕಾಯಿನ್ ಹಗರಣದ (Bitcoin Scam) ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy), ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಎಂದು ಪ್ರಶ್ನಿಸಿದರು.

ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?:

ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟ ಎಂದ್ರು. ಇದೆಲ್ಲಾ ಗಮನಿಸಿದ್ರೆ ಬಿಟ್ ಕಾಯಿನ್ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಸರ್ಕಾರದ ಪರ ವಕೀಲರು ಎಷ್ಟರ ಮಟ್ಟಿಗೆ ವಾದ ಮಂಡಿಸಿದ್ದಾರೆ ಎನ್ನುವುದೂ ಮುಖ್ಯ. ಇಲ್ಲಿ ಯಾರಿಂದ ಯಾರ ರಕ್ಷಣೆ ಆಗಿದೆ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಹೇಳಿದರು.

ಬಿಟ್​ಕಾಯಿನ್​ ವಿಚಾರಕ್ಕೆ ಹೆಚ್​ಡಿಕೆ ಪ್ರತಿಕ್ರಿಯೆ

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಪ್ರಕರಣ: ಸಿಎಂ ಬೊಮ್ಮಾಯಿ ಬೆನ್ನಿಗೆ ನಿಂತರಾ ಪ್ರಧಾನಿ ಮೋದಿ..?

ಹಗರಣ ತನಿಖೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೂಕ್ತ ತನಿಖೆ ಆಗಲಿ ಅಂತ ಅವರು ಪತ್ರ ಬರೆದಿರಬಹುದು. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಒಳಗೊಂಡಿದ್ದಾರೆ ಎನ್ನುವ ಮಾತೂ ಇದೆ. ಪದೇ ಪದೆ ಹೀಗಾದರೆ ಜನ ಯಾರನ್ನು ನಂಬಬೇಕು. ಒಬ್ಬರಿಂದ ಜನರು ಎಲ್ಲಾ ರಾಜಕಾರಣಿಗಳ ಕಡೆ ಕೈ ತೋರಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಭಾರತದ ಮಾನ ಹರಾಜು ಆಗಬಾರದು ಅಂತ ಒಂದಿಷ್ಟು ಜನರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣುತ್ತೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನಮಂತ್ರಿಯವರು ಅಮೆರಿಕಾಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಆಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಹೇಳಿದರು.

ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ:

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ‌ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲ ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಮಾರ್ಮಿಕವಾಗಿ ನುಡಿದರು.ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಾಕ್ಷಿ ಸಮೇತ ಹೋರಾಟ ಮಾಡಿದ್ದು ಜೆಡಿಎಸ್ (JDS) ಮಾತ್ರ. ನಮ್ಮ ಹೋರಾಟದ ಫಲವಾಗಿ ಯಾರೆಲ್ಲ ಜೈಲಿಗೆ ಹೋದರು ಎನ್ನುವುದು ಜನತೆಗೆ ಗೊತ್ತಿದೆ ಎಂದರು.

ಸರ್ಕಾರ ಏನು ಮಾಡುತ್ತಿದೆ? :

ರಾಜ್ಯದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ರೈತರು, ಸಾಮಾನ್ಯ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದರೋ ಗೊತ್ತಿಲ್ಲ. ಅವರಿಗೆಲ್ಲ ಯಾರು ಕೆಲಸ ಹೇಳುತ್ತಿದ್ದರೋ ತಿಳಿಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತ ಪರಿಸ್ಥಿತಿ ಇದೆ. ಯಾರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಆಡಳಿತ ಯಂತ್ರ ಕುಸಿಯುವ ಹಂತಕ್ಕೆ ಹೋಗುವುದರೊಳಗೆ ಅತ್ತ ಸರಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಎಲ್ಲರೂ ಗಮನಿಸಬೇಕು. ಮುಖ್ಯ ಆಯುಕ್ತರನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನ್ಯಾಯಾಲಯ ಸರಕಾರಕ್ಕೆ ನೀಡಿದೆ. ಇದೆಲ್ಲವನ್ನು ಸರ್ಕಾರ ಕೂಡಲೇ ಸರಿ ಮಾಡಿಕೊಳ್ಳಬೇಕು ಎಂದು ಹೆಚ್​​ಡಿ ಕೆ ಕಿವಿಮಾತು ಹೇಳಿದರು.

6,000 ಕೋಟಿ ರೂ. ಹಣ ಅಕ್ರಮ ವರ್ಗಾವಣೆ:

ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂ.ನಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ ಎಂದರು.

ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪರಿಷತ್​​ ಚುನಾವಣೆಗೆ ಹಾಸನದಿಂದ ಡಾ.ಸೂರಜ್ ರೇವಣ್ಣ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯೆ

ಇದನ್ನೂ ಓದಿ:ಬಿಟ್ ಕಾಯಿನ್ ಹಗರಣದ ದಾಖಲೆ ತನಿಖಾಧಿಕಾರಿಗಳಿಗೆ ನೀಡಿ: 'ಕೈ' ನಾಯಕರಿಗೆ ಗೃಹ ಸಚಿವರ ಸವಾಲು

ಸೂರಜ್​ ರೇವಣ್ಣ ಸ್ಪರ್ಧೆ ವಿಚಾರ:

ಪರಿಷತ್​​ ಚುನಾವಣೆಗೆ ಹಾಸನದಿಂದ ಡಾ.ಸೂರಜ್ ರೇವಣ್ಣ (Dr.Suraj Revanna) ಸ್ಪರ್ಧೆ ವಿಚಾರ ಕುರಿತು ಮಾತನಾಡಿದ ಹೆಚ್​​ಡಿಕೆ, ಈ ವಿಚಾರ ಪಕ್ಷದ ಕಚೇರಿಗೆ ಬಂದಿಲ್ಲ, ಹಾಸನ ಜಿಲ್ಲೆಯಲ್ಲಿ ಆರು ಜನ ಶಾಸಕರು ಹಾಗೂ ಮುಖಂಡರು ಇದ್ದಾರೆ. ಅವರು ಯಾವ ಅಭ್ಯರ್ಥಿಯನ್ನು ಫೈನಲ್ ಮಾಡ್ತಾರೆ ನೋಡಬೇಕು. ಸೂಕ್ತ ಅಭ್ಯರ್ಥಿ ಸೂಚಿಸಿದ ನಂತರ ಮಾತನಾಡುತ್ತೇನೆ ಎಂದು ಹೇಳಿದರು. ಉಳಿದಂತೆ ಎಲ್ಲೆಲ್ಲಿ ನಮ್ಮ ಅಭ್ಯರ್ಥಿಗಳನ್ನು ಹಾಕಬೇಕೋ ಅಲ್ಲೆಲ್ಲಾ ಈಗಾಗಲೇ ಚರ್ಚೆ, ಸಮಾಲೋಚನೆ ನಡೆಸುತ್ತಿದ್ದೇವೆ. ಸದ್ಯದಲ್ಲೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

Last Updated : Nov 11, 2021, 7:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.