ETV Bharat / state

ಎಲ್ಲದಕ್ಕೂ ಕೇಂದ್ರದ ಕಡೆ ನೋಡದೆ ರಾಜ್ಯ ಸರ್ಕಾರ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ: ಹೆಚ್​ಡಿಕೆ - ಬ್ಲ್ಯಾಕ್ ಫಂಗಸ್ ಔಷಧಿ ಕೊರತೆ

ಬೇರೆ ರಾಜ್ಯಗಳು ಕಪ್ಪು ಶಿಲೀಂಧ್ರದ ಔಷಧ ಪೂರೈಕೆಗೆ ಈಗಾಗಲೇ ಬೇಡಿಕೆ ಇಟ್ಟಿವೆ. ಆದರೆ, ಕರ್ನಾಟಕ ಸರ್ಕಾರ ಮಾತ್ರ ಕೇಂದ್ರದ ಕಡೆ ನೋಡುತ್ತಿದೆ. ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಿ ಎಂದು ಮಾಜಿ ಸಿಎಂ ಹೆಚ್.​​ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಅವರು ಸರಣಿ ಟ್ವೀಟ್ ಮಾಡಿದ್ದಾರೆ.

EX CM HD Kumaraswamy tweet
ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್
author img

By

Published : May 22, 2021, 1:20 PM IST

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡುಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರ ರಾಜ್ಯಕ್ಕೆ ಸದಾ ತಾರತಮ್ಯ ಮಾಡುತ್ತದೆ. ಉದಾಹರಣೆಗೆ ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್‌ ಮೋಸ. ಕಪ್ಪು ಶಿಲೀಂಧ್ರದ ಔಷಧದಲ್ಲೂ ಇದು ಮುಂದುವರೆಯುತ್ತಿದೆ ಎಂದಿದ್ದಾರೆ.

  • ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. 'ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ?
    1/6

    — H D Kumaraswamy (@hd_kumaraswamy) May 22, 2021 " class="align-text-top noRightClick twitterSection" data=" ">

ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೋಡುತ್ತಿದೆ. 'ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ ಎಂದು ಹೆಚ್​​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ 'ರಾಕ್ಷಸ ಅಲಸ್ಯ'ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ Amphotericin B ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ ಮತ್ತು ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಯಾಕೆ ಕಾಳಜಿಯಿಲ್ಲ ಎಂದು ಕೇಳಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ?. ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ 'ಇಲ್ಲ' ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.