ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ.
ಬುಧವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಚನ್ನಪಟ್ಟಣಕ್ಕೆ ತೆರಳುವ ಕುಮಾರಸ್ವಾಮಿ ಅವರು ದೊಡ್ಡಮಳೂರುನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ನಂತರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಋಣಮುಕ್ತ ಕಾಯ್ದೆ ಪ್ರಗತಿಯ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅವರು ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಕುಮಾರಸ್ವಾಮಿ ಅವರು, ಸೆ.12 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಿಯೋ ಮೆರಿಡಿಯನ್ ಹೋಟೆಲ್ನಲ್ಲಿ ಜೆಡಿಎಸ್ನ ಜಿಲ್ಲಾ ಕಾರ್ಯಕರ್ತರ ಸಭೆ ಕರೆದಿದ್ದಾರೆ. ನಂತರ ಕೆ.ಆರ್.ಪೇಟೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಸಂಜೆ ಬೆಂಗಳೂರಿಗೆ ರಸ್ತೆ ಮೂಲಕ ವಾಪಸಾಗಲಿದ್ದಾರೆ. ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಹೆಚ್.ಡಿಕೆ ಹಲವು ಕಡೆ ಪ್ರವಾಸ ಕೈಗೊಳ್ಳುತ್ತಿದ್ದಾರೆ.