ETV Bharat / state

ರಾಜ್ಯದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಮಾಜಿ ಸಿಎಂ ಹೆಚ್‌ಡಿಕೆ

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕು. ಇಲ್ಲವಾದಲ್ಲಿ ಜನತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯೆತೆಯಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ..

Hdk
Hdk
author img

By

Published : May 4, 2021, 10:43 PM IST

ಬೆಂಗಳೂರು : ರಾಜ್ಯದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೋರಿರುವ ಹೆಚ್‌ಡಿಕೆ, ರಾಜ್ಯದಲ್ಲಿ ಎಷ್ಟು ಪ್ರಮಾಣದ ಆಮ್ಲಜನಕ ಕೊರತೆಯಿದೆ ಎಂಬುದು ನಿಖರವಾಗಿ ಮಾಹಿತಿ ಇಲ್ಲ. ಇದನ್ನು ಸರಿಪಡಿಸಲು ಪರಿಹಾರವೂ ಕಾಣಿಸುತ್ತಿಲ್ಲ. ಹೀಗಾಗಿ, ಸಮಸ್ಯೆ ಶೀಘ್ರ ಬಗೆಹರಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಆಮ್ಲಜನಕದ ಕೊರತೆಯಿಂದ ರಾಜ್ಯದ ಉತ್ತರ ಮತ್ತು ದಕ್ಷಿಣ ಗಡಿ ಜಿಲ್ಲೆಗಳಾಗಿರುವ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನ, ಕಲಬುರಗಿ ಜಿಲ್ಲೆಯ ಆಸ್ಪತ್ರೆಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಈ ಎರಡು ಘಟನೆಗಳ ನಂತರ, ರಾಜ್ಯದ ಇತರೆ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆ ಭೀತಿ ಎದುರಾಗಿದೆ.

ಅಲ್ಲದೆ, ಬೆಂಗಳೂರಿನ ಕೆಲ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಲಿದೆ ಎಂಬ ಮಾಹಿತಿ ಬರುತ್ತಿದೆ. ಆದ್ದರಿಂದ ತಕ್ಷಣ ರಾಜ್ಯಕ್ಕೆ ಅಗತ್ಯವಿರುವ ಆಮ್ಲಜನಕ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಪ್ರತಿ ದಿನ 70 ಟನ್ ಆಕ್ಸಿಜನ್ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

ಈ ಎರಡೂ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಕೇವಲ 20 ಟನ್ ಮಾತ್ರ ಆಮ್ಲಜನಕ ಲಭ್ಯವಿದೆ ಎಂಬ ಮಾಹಿತಿ ಇದೆ. ಅಲ್ಲದೆ, ತುಮಕೂರು, ಬೆಳಗಾವಿ, ಧಾರವಾಡ ಮತ್ತು ಹಾಸನ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದೇ ರೀತಿಯ ಬಿಕ್ಕಟ್ಟು ಉಂಟಾಗುವ ಆತಂಕವಿದೆ.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕು. ಇಲ್ಲವಾದಲ್ಲಿ ಜನತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯೆತೆಯಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಕರ್ನಾಟಕದಲ್ಲಿ ಉತ್ಪಾದಿಸುವ ಆಕ್ಸಿಜನ್ ಸಂಪೂರ್ಣವಾಗಿ ಬಳಸಿಕೊಳ್ಳಲು ಅವಕಾಶ ನೀಡಿದರೆ ಯಾವುದೇ ಕೊರತೆ ಇರುವುದಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾಧ್ಯಮಗಳಿಗೆ ವಿವರಿಸಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕಾಗಿದ್ದು, ನಿಮ್ಮ ಮಧ್ಯಸ್ಥಿಕೆ ಅಗತ್ಯವಿದೆ ಎಂದು ಪತ್ರದಲ್ಲಿ ಹೆಚ್‌ಡಿಕೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.