ETV Bharat / state

ಸಿದ್ದರಾಮಯ್ಯ 75ನೇ ಜನ್ಮ ದಿನ: ಆ.3ರಂದು ದಾವಣಗೆರೆಯಲ್ಲಿ ಅದ್ದೂರಿ ಅಮೃತ ಮಹೋತ್ಸವ

ಸಿದ್ದರಾಮಯ್ಯನವರ 75ನೇ ವರ್ಷದ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯುವ ಅಮೃತ ಮಹೋತ್ಸವವನ್ನು ಕಾಂಗ್ರೆಸ್​ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ ಎಂದು ಆರ್.ವಿ.ದೇಶಪಾಂಡೆ ಹೇಳಿದರು.

ex-cm-siddaramaiah-75th-birthday-celebration-program-to-held-in-davangere-on-august-3rd
ಅಮೃತ ಮಹೋತ್ಸವ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಆರ್.ವಿ.ದೇಶಪಾಂಡೆ
author img

By

Published : Jul 5, 2022, 5:20 PM IST

ಬೆಂಗಳೂರು: ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಅಭಿನಂದನಾ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ನಾಲ್ಕು ದಶಕದಿಂದ ರಾಜಕೀಯದಲ್ಲಿದ್ದಾರೆ. ರೈತ ಕುಟುಂಬದಲ್ಲಿ ಹುಟ್ಟಿ ಬಹಳ ಕಷ್ಟಪಟ್ಟಿದ್ದಾರೆ. ತಂದೆ-ತಾಯಿಗಳ ಆಶೀರ್ವಾದದಿಂದ ವಕೀಲರಾದವರು. ಜೀವನದ ಕಷ್ಟ ನೋಡಿದರು.

ಸಾಮಾಜಿಕ ನ್ಯಾಯದ ಪರವಾಗಿ ಹಲವಾರು ಹೋರಾಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಿ ಪ್ರೊ.ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡವರು. ರಾಜಕೀಯ ಕ್ಷೇತ್ರದಲ್ಲಿ ಏಳು ಬೀಳು ಕಂಡಿದ್ದಾರೆ. ಈಗ ಅವರಿಗೆ 75 ವರ್ಷ ತುಂಬುತ್ತಿದೆ. ಹಾಗಾಗಿ, ಅಭಿಮಾನಿಗಳು, ಹಿತೈಷಿಗಳ ಒತ್ತಾಸೆಯಿಂದ ಅಮೃತ ಮಹೋತ್ಸವ ಮಾಡಲಾಗುತ್ತಿದೆ ಎಂದರು.

ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಉಳಿಯುವುದು ಕಷ್ಟ. ಆದರೆ, ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಉಳಿದಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಇದ್ದಾರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾದರು. ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು.

2013ರಲ್ಲಿ ಎಲ್ಲರ ಶ್ರಮದಿಂದ ಕಾಂಗ್ರೆಸ್​ಗೆ ಬಹುಮತ ಬಂತು. ಆಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅವರು ತಂದ ಕಾರ್ಯಕ್ರಮಗಳು ಯಾರೂ ಸಹ ಯೋಚನೆ ಮಾಡಲು ಸಾಧ್ಯವಿಲ್ಲ. ಅದಕ್ಕೆ ಕಾರಣ ಸಿದ್ದರಾಮಯ್ಯ ಕಂಡ ಬಡತನ. ಅನ್ನಭಾಗ್ಯ, ವಿದ್ಯಾಸಿರಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು.

ಆರ್.ವಿ.ದೇಶಪಾಂಡೆ

ನಾನೂ ಕೂಡ 1983ರಿಂದ ಅವರ ಸ್ನೇಹಿತನಾದೆ. ಯಾವುದೇ ಮುಚ್ಚುಮರೆ ಇಲ್ಲದೇ ಸಿದ್ದರಾಮಯ್ಯ ಮಾತನಾಡುತ್ತಾರೆ. ಅವರ ಆಡಳಿತವನ್ನು ಈ ನಾಡಿನ‌ ಜನತೆ ಮೆಚ್ಚಿಕೊಂಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಪ್ರಣಾಳಿಕೆಯಲ್ಲಿದ್ದ 165 ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಹೇಳಿದರು.

ರಾಹುಲ್​ ಗಾಂಧಿ ಅವರಿಂದ ಉದ್ಘಾಟನೆ: ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆ ಹಿತೈಷಿಗಳ ಆಲೋಚನೆಯಾಗಿದ್ದು, ಆಗಸ್ಟ್ 3ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶವನ್ನು ಕಾಂಗ್ರೆಸ್​ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು, ಅವರ ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು.

ಶಾಸಕ, ಅಮೃತಮಹೋತ್ಸವ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ಸಿದ್ದರಾಮಯ್ಯ ಈ ಆಚರಣೆ ಅವಶ್ಯಕತೆ ಇಲ್ಲ ಅಂದಿದ್ದರು. ಆದರೆ, ನಾವೆಲ್ಲ ಅವರ ಮನವೊಲಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ರಾಹುಲ್ ಗಾಂಧಿ ಅವರು ಕೂಡ ಈ ಕಾರ್ಯಕ್ರಮಕ್ಕೆ ಬರುತ್ತಾರೆ. ಸಿದ್ದರಾಮಯ್ಯ ನಡೆದು ಬಂದ ಹಾದಿ ಹೊಸ ಪೀಳಿಗೆಗೆ ತಿಳಿಸಬೇಕು. ಅವರ ಕಷ್ಟದ ಹಾದಿ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ, ರಾಜ್ಯಾದ್ಯಂತ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಇದ್ದಾರೆ. ಹಾಗಾಗಿ ಎಲ್ಲರೂ ಬರಲು ಅನುಕೂಲ ಆಗಲಿ ಅಂತ ದಾವಣಗೆರೆಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ಎಸ್.ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್.ಹನುಮಂತಯ್ಯ, ಎಸ್.ಎಸ್.ಮಲ್ಲಿಕಾರ್ಜುನ, ಪಿ.ಜಿ.ಆರ್.ಸಿಂಧ್ಯಾ, ಬಿ.ಎಲ್.ಶಂಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಹಗರಣ.. ಗೃಹ ಸಚಿವರ ವಜಾ, ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.