ETV Bharat / state

ಸಿದ್ದರಾಮಯ್ಯ ದೆಹಲಿ ಪ್ರವಾಸ : ಇಂದು ಸಂಜೆ ರಾಹುಲ್ ಗಾಂಧಿ ಭೇಟಿಯಾಗಲಿರುವ ಮಾಜಿ ಸಿಎಂ - ಸಿದ್ದರಾಮಯ್ಯ,

ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಚರ್ಚೆ ಅಪ್ರಸ್ತುತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ದೆಹಲಿ ಪ್ರವಾಸದಲ್ಲಿರುವ ಅವರು ಇಂದು ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

Siddaramaiah Press meet
ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Jul 20, 2021, 12:01 PM IST

Updated : Jul 20, 2021, 1:15 PM IST

ಬೆಂಗಳೂರು/ದೆಹಲಿ: ಕಾಂಗ್ರೆಸ್​ನಲ್ಲಿ ಹಲವು ದಿನಗಳಿಂದ ಚರ್ಚೆ ಆಗುತ್ತಿರುವ ವಿಷಯ ಅಂದ್ರೆ ಮುಂದಿನ ಸಿಎಂ ಯಾರೆಂಬುದು. ಈ ಕುರಿತಂತೆ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು ಇಂದು ಸಂಜೆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದದ್ದು. ನಾವೀಗ ಪ್ರತಿಪಕ್ಷದಲ್ಲಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ. ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಹೇಳಿದ್ರು.

ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಸಿದ್ದರಾಮಯ್ಯ ಹೇಳಿದ್ರು.

ಓದಿ : ರೇಣುಕಾಚಾರ್ಯ ತಂಡದ ದೆಹಲಿ ಪ್ರವಾಸಕ್ಕೆ ಬಿಎಸ್​ವೈ ಬ್ರೇಕ್: ಹೈಕಮಾಂಡ್ ಭೇಟಿ ಮಾಡದಂತೆ ಸೂಚನೆ

ಇಂದು ಸಂಜೆ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ ದೆಹಲಿಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Last Updated : Jul 20, 2021, 1:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.