ETV Bharat / state

ಬಿಎಸ್‌ವೈ ಅವರನ್ನು ಇದ್ದಕ್ಕಿದ್ದಂತೆ ತೆಗೆದುಹಾಕಿದ್ದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಕಾಂಗ್ರೆಸ್‌ - Siddaramaiah recations

ಯಡಿಯೂರಪ್ಪರನ್ನು ಬದಲಿಸಿ ಹೈಕಮಾಂಡ್​ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ. ಈ ಸಂದರ್ಭದಲ್ಲಿ ಇದು ಬೇಕಿರಲಿಲ್ಲ ಎಂದು ರಾಜ್ಯ ರಾಜಕೀಯದಲ್ಲಾದ ಸಿಎಂ ಬದಲಾವಣೆ ಬಗ್ಗೆ​ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಟ್ವೀಟ್ ಮಾಡಿದ್ದಾರೆ.

Ex CM Siddaramaiah tweeted about CM change

author img

By

Published : Jul 27, 2021, 6:13 PM IST

ಬೆಂಗಳೂರು: ರಾಜ್ಯದಲ್ಲಿನ ಭಾರತೀಯ ಜನತಾ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಶಾಸಕರಿಂದ ಆಯ್ಕೆಯಾಗಿದ್ದ ಯಡಿಯೂರಪ್ಪರನ್ನು ಇದ್ದಕ್ಕಿದ್ದಂತೆ ತೆಗೆದುಹಾಕಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

  • ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. @BSYBJP ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿಯಾದವರು, ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. @BJP4Karnataka ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆಯಾಡಿಸಬೇಕು. 5/5

    — Siddaramaiah (@siddaramaiah) July 27, 2021 " class="align-text-top noRightClick twitterSection" data=" ">

ಟ್ವೀಟ್ ಮಾಡುವ ಮೂಲಕ ಆಡಳಿತಾರೂಢ ಬಿಜೆಪಿ ಪಕ್ಷವನ್ನು ತರಾಟೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ದೆಹಲಿಯಲ್ಲಿ ಕುಳಿತಿರುವ ಹೈಕಮಾಂಡ್ ಮಾತಿಗೆ ಎಲ್ಲರೂ ಸುಮ್ಮನೆ ತಲೆಯಾಡಿಸಬೇಕು ಎಂದು ಲೇವಡಿ ಮಾಡಿದ್ದಾರೆ.

  • BJP ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ?

    2019ರಲ್ಲಿ ನೆರೆ ಬಂದಾಗ ಸಚಿವ ಸಂಪುಟ ರಚನೆಗೆ ಅವಕಾಶ ಕೊಡದೆ ಪ್ರವಾಹದಲ್ಲಿ ಜನ ನರಳುವಂತೆ ಮಾಡಿತ್ತು.
    ಈಗ ನೆರೆ ಬಂದಿರುವ ಸಂದರ್ಭದಲ್ಲೂ ಮುಖ್ಯಮಂತ್ರಿಯನ್ನು ಬದಲಾಯಿಸಿ ಸರ್ಕಾರವೇ ಇಲ್ಲದಂತೆ ಮಾಡಿದೆ.

    ಜನರ ತಾಳ್ಮೆ ಪರೀಕ್ಷಿಸುತ್ತಿರುವ BJPಯವರಿಗೆ ಜನರೇ ಬುದ್ದಿ ಕಲಿಸಲಿದ್ದಾರೆ‌.

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 27, 2021 " class="align-text-top noRightClick twitterSection" data=" ">

ಇನ್ನೊಂದೆಡೆ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಕೂಡ ಟ್ವೀಟ್​ ಮಾಡಿ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಬಿಜೆಪಿ ಹೈಕಮಾಂಡ್​ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೇ ಎಂದು ಪ್ರಶ್ನಿಸಿರುವ ಅವರು, ಈ ಹಿಂದೆ ನೆರೆ ಬಂದಾಗ ಸಂಪುಟ ರಚನೆಗೆ ಅವಕಾಶ ಮಾಡಿ ಕೊಡದೇ ಪ್ರವಾಹದಲ್ಲಿ ಜನ ನರಳುವಂತೆ ಮಾಡಿತ್ತು. ಈಗ ಮತ್ತೆ ನೆರೆ ಬಂದಿದೆ. ಈ ಸಂದರ್ಭದಲ್ಲಿಯೂ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿ ಸರ್ಕಾರವನ್ನೇ ಇಲ್ಲದಂತೆ ಮಾಡಿದೆ. ಜನರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ರಾಜ್ಯದ ಜನರೇ ಬುದ್ಧಿ ಕಲಿಸಬೇಕು ಎಂದಿದ್ದಾರೆ.

  • ಕೆಲವು ಮನೆಗಳಲ್ಲಿ ಮೂರು - ನಾಲ್ಕು ಕುಟುಂಬಗಳು ವಾಸವಿರುತ್ತವೆ. ಅಂತಹಾ ಮನೆಗಳು ಪ್ರವಾಹದಿಂದ ಬಿದ್ದುಹೋದರೆ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಮನೆ ಕಟ್ಟಿಸಿಕೊಡುವಂತೆ ನಾನು ಈ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಅಂತಹಾ ಕುಟುಂಬಕ್ಕೆ ಕೇವಲ ಒಂದು ಮನೆ ಕಟ್ಟಿಸಿಕೊಟ್ಟು ಕೈತೊಳೆದುಕೊಂಡಿದೆ. 4/5#ಖಾನಾಪುರ

ಸದ್ಯ ಬೆಳಗಾವಿ ಜಿಲ್ಲೆಯ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ವಿವಿಧೆಡೆ ತೆರಳಿ ಸಂತ್ರಸ್ತರ ಅಳಲು ಆಲಿಸುತ್ತಿದ್ದಾರೆ. ಜಿಲ್ಲೆ ಸೇರಿದಂತೆ ಭಾರಿ ಪ್ರಮಾಣದಲ್ಲಿ ಪ್ರವಾಹ ಬಂದಿದ್ದು ಅಧಿವೇಶನದಲ್ಲಿ ನೆರೆ ಪರಿಹಾರ ಬಗ್ಗೆ ಚರ್ಚಿಸಲು ಒತ್ತಾಯ ಮಾಡುವೆ. ಪರಿಹಾರ ಕೊಡಿಸುವಂತೆ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಸಾಂತ್ವನ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.