ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಅವಾಸ್ತವಿಕ ಲಾಕ್ಡೌನ್ ಘೋಷಣೆ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು, ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ಧಂಗೆ ಎದ್ದರೂ ಆಶ್ಚರ್ಯ ಇಲ್ಲ. ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ, ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ ಎಂದಿದ್ದಾರೆ.
-
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ.
— Siddaramaiah (@siddaramaiah) May 9, 2021 " class="align-text-top noRightClick twitterSection" data="
ಆದರೆ @CMofKarnataka ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು.
ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.#AntiPeopleLockdown
6/6
">ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ.
— Siddaramaiah (@siddaramaiah) May 9, 2021
ಆದರೆ @CMofKarnataka ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು.
ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.#AntiPeopleLockdown
6/6ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ.
— Siddaramaiah (@siddaramaiah) May 9, 2021
ಆದರೆ @CMofKarnataka ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು.
ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.#AntiPeopleLockdown
6/6
ವಾಹನ ಬಳಸುವಂತಿಲ್ಲ: ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2 ರಿಂದ 3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕಾ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ? ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ, ಅಲ್ಲಿಗೆ ತೆರಳಲು ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ? ಎಂದು ಪ್ರಶ್ನಿಸಿದ್ದಾರೆ.
ವಾಸ್ತವ ಸ್ಥಿತಿ ಅರಿಯಲಿ: ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ. ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ. ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು ಎಂದಿದ್ದಾರೆ.