ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಸಿಎಂ ಎಸ್ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದಾರೆ. ವಿಶ್ರಾಂತಿಯ ಜೊತೆಗೆ ದಿನಪತ್ರಿಕೆಯಲ್ಲಿ ಬರುವ ಪ್ರಸ್ತುತ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ. ಆಸ್ಪತ್ರೆಯಲ್ಲೇ ವಿವಿಧ ದಿನಪತ್ರಿಕೆಗಳ ಮೇಲೆ ಕಣ್ಣಾಡಿಸುತ್ತಿದ್ದಾರೆ.
ಶೀಘ್ರ ಚೇತರಿಕೆ ಕಾಣುತ್ತಿರುವ ಎಸ್ಎಂ ಕೃಷ್ಣ ಉಸಿರಾಟ ಸಹಜ ಸ್ಥಿತಿಗೆ ಬಂದಿದ್ದು, ಸಂಪೂರ್ಣವಾಗಿ ಸ್ಥಿರ ಆರೋಗ್ಯ ಹೊಂದಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಎಸ್ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದಾರೆ, ಯಾರೂ ಆತಂಕಕ್ಕೆ ಒಳಗಾಗಬೇಡಿ: ಸಿಎಂ ಬೊಮ್ಮಾಯಿ