ETV Bharat / state

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ, ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ: ಹೆಚ್​ಡಿಕೆ

ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರೀಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

author img

By

Published : Dec 27, 2021, 12:08 PM IST

hd kumaraswamy tweet
ಹೆಚ್.ಡಿ ಕುಮಾರಸ್ವಾಮಿ ಟ್ವೀಟ್​

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್​ ಮೂಲಕ ಅವರು ಆಕ್ರೋಶ ಹೊರಹಾಕಿದ್ದಾರೆ.

'ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ' ಎಂದು ಹಿಂದಿ ಹೇರಿಕೆ ನಿಲ್ಲಿಸಿ ಎನ್ನುವ ಹ್ಯಾಷ್ ಟ್ಯಾಗ್​​ನೊಂದಿಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

  • ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. 6/6#ಹಿಂದಿ_ಹೇರಿಕೆ_ನಿಲ್ಲಿಸಿ

    — H D Kumaraswamy (@hd_kumaraswamy) December 27, 2021 " class="align-text-top noRightClick twitterSection" data=" ">

'ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ'

ನಿನ್ನೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್​​ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹವಾಗಿದೆ. ಉದ್ದೇಶಪೂರ್ವಕವಾಗಿಯೇ ಇಂತಹ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ? ಎಂದು ಪ್ರಶ್ನಿಸಿದ್ದಾರೆ.

'ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ':

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ಇನ್ನೂ ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರೀಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರೀಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು. ಪರೀಕ್ಷೆಯು ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾವೇನು ರಾಜಕಾರಣ ಮಾಡುತ್ತೇವೆಂದು ನಿಮಗೆ ಹೇಳುವ ಅಗತ್ಯವಿಲ್ಲ: ಮಾಧ್ಯಮಗಳ ಮೇಲೆ ಸಿಎಂ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.