ಕೆ.ಆರ್.ಪುರ: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂನ ಬಸವನಪುರದಲ್ಲಿ ನಡೆದಿದೆ.
ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ರೂಂ ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಆತ್ಮಹತ್ಯೆಗೆ ಯತ್ನಿಸಿದ ಕೂಡಲೇ ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು, ಚಿಕಿತ್ಸೆ ಫಲಕಾರಿಯಾಗದೇ ವಿನೋದಾ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿಯ ಸಾವಿನ ವಿಚಾರ ಕೇಳುತ್ತಿದ್ದಂತೆ ಪತಿ ಬಿ.ಎನ್. ಜಯಪ್ರಕಾಶ್ ಅಸ್ವಸ್ಥರಾಗಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ಗೆ ಒಳಗಾಗಿದ್ದರು ಎಂದು ಕುಟುಂಬದ ಮೂಲದವರು ಹೇಳುತ್ತಿದ್ದಾರೆ. ಮೂರುವರೆ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರಿಗೆ ಎರಡು ವರ್ಷದ ಹೆಣ್ಣು ಮಗು ಇದೆ.