ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಭಾರತೀಯ ಜನತಾ ಪಾರ್ಟಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಖುದ್ದಾಗಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
-
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
— H D Kumaraswamy (@hd_kumaraswamy) July 27, 2019 " class="align-text-top noRightClick twitterSection" data="
">ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
— H D Kumaraswamy (@hd_kumaraswamy) July 27, 2019ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
— H D Kumaraswamy (@hd_kumaraswamy) July 27, 2019
ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಹೆಚ್ಡಿಕೆ, ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಮೈತ್ರಿ ವಿಚಾರ ಮುನ್ನೆಲೆಗೆ ಬಂದಿದ್ದು ಹೇಗೆ?
ಕೆಲ ದಿನಗಳಲ್ಲಿಯೇ ಸರ್ಕಾರ ರಚಿಸಲಿರುವ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕೆಂದು ಪಕ್ಷದ ಕೆಲ ಶಾಸಕರು ಒತ್ತಾಯ ಮಾಡುತ್ತಿದ್ದು, ಹೆಚ್.ಡಿ. ಕುಮಾರಸ್ವಾಮಿ ಅವರು ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದರು.