ಬೆಂಗಳೂರು: ಬಿಹಾರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷ ಪ್ರಕಟಿಸಿರುವ ಪ್ರಣಾಳಿಕೆಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಬಿಹಾರ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡುವ ಭರವಸೆಯನ್ನು ನೀಡಿರುವುದನ್ನು ಲೇವಡಿ ಮಾಡಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಬಿಹಾರದ ಚುನಾವಣಾ ಪ್ರಣಾಳಿಕೆ ಕ್ಷುಲ್ಲಕ ಮನಃಸ್ಥಿತಿಯನ್ನು ಅನಾವರಣ ಮಾಡಿದೆ. ಪ್ರಣಾಳಿಕೆಯ ಪ್ರಕಾರ ಕೇವಲ ಬಿಹಾರದ ಜನರಿಗೆ ಮಾತ್ರ ಉಚಿತ ಕೊರೊನಾ ಲಸಿಕೆಯಂತೆ. ಹಾಗಾದರೆ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಜನರಿಗೆ ಉಚಿತ ಲಸಿಕೆಯಿಲ್ಲವೆ? ಕೋವಿಡ್-19 ಲಸಿಕೆಯ ವಿಚಾರದಲ್ಲೂ ರಾಷ್ಟ್ರೀಯ ಬಿಜೆಪಿ ನಾಯಕರು ಕೀಳು ಮಟ್ಟದ ರಾಜಕಾರಣಕ್ಕೆ ಇಳಿಯಬೇಕಿತ್ತೆ!!!! ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತಮಿಳುನಾಡು ಸೇರಿದಂತೆ ಮೂರು ರಾಜ್ಯಗಳ ಉಸ್ತುವಾರಿಯಾಗಿ ನೇಮಿಸಿದ ನಂತರ ನಿರಂತರವಾಗಿ ರಾಷ್ಟ್ರೀಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ದಿನೇಶ್ ಗುಂಡೂರಾವ್ ವಿಧಾನಸಭೆ ಚುನಾವಣೆ ವಿಚಾರವಾಗಿ ದನಿ ಎತ್ತಿದ್ದು ರಾಷ್ಟ್ರೀಯ ಬಿಜೆಪಿ ನಾಯಕರ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ.