ETV Bharat / state

OBC ಬಿಲ್​ಗೆ ಸ್ವಾಗತ: 60 - 65 ವರ್ಷಗಳ ಅವಧಿಯಲ್ಲಿ ಈ ರೀತಿ ಸಂಸತ್ ಸದನ ನಡೆದಿದ್ದು ನೋಡಿಲ್ಲ - ಹೆಚ್​ಡಿಡಿ ಬೇಸರ - ಒಬಿಸಿ ಬಿಲ್ ಜಾರಿ ಕುರಿತು ದೇವೇಗೌಡ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ಒಬಿಸಿ ಬಿಲ್ ತಂದಿರುವುದು ಸ್ವಾಗತಾರ್ಹ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಾರಿ ಸದನದಲ್ಲಿ ಯಾವುದೇ ವಿಚಾರ ಚರ್ಚೆ ಆಗಿಲ್ಲ, ಕಳೆದ 60-65 ವರ್ಷಗಳ ಅವಧಿಯಲ್ಲಿ ಈ ರೀತಿ ಸಂಸತ್ ಸದನ ನಡೆದಿದ್ದು ನೋಡಿಲ್ಲ ಎಂದು ಹೇಳಿದ್ದಾರೆ.

ex pm hd devegowda welcomes obc bill
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸುದ್ದಿಗೋಷ್ಟಿ
author img

By

Published : Aug 12, 2021, 3:39 PM IST

ಬೆಂಗಳೂರು/ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಒಂದು ವಿಚಾರಕ್ಕೆ ಮೆಚ್ಚಬೇಕು. ತಮ್ಮ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಅವಕಾಶ ಕೊಟ್ಟಿದ್ದಾರೆ. ಜೊತೆಗೆ ಒಬಿಸಿ ಬಿಲ್ ತಂದಿರುವುದು ಸ್ವಾಗತಾರ್ಹ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ನವದೆಹಲಿಯ ತಮ್ಮ ಕಚೇರಿಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್​ಸಿ, 12 ಎಸ್​ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಅದು ಏನೇ ಇರಲಿ, ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸುದ್ದಿಗೋಷ್ಠಿ

ಈ ಬಾರಿ ಅಧಿವೇಶದಲ್ಲಿ ನಾನು ಒಂದು ದಿನವೂ ಗೈರು ಆಗಿಲ್ಲ. ಎಲ್ಲ ದಿನದ ಕಲಾಪಗಳಲ್ಲಿ ಭಾಗಿಯಾಗಿದ್ದೇನೆ. ಶನಿವಾರ ರಜೆ ದಿನದಲ್ಲಿ ನಾನು ವಾರಾಣಸಿಗೆ ಹೋಗಿ ಬಂದೆ. ನಾನು ಮೊದಲ ಬಾರಿಗೆ ಇಡೀ ಅಧಿವೇಶನದಲ್ಲಿ ಕೂತಿದ್ದೆ ಎಂದರು.

60-65 ವರ್ಷಗಳ ಅವಧಿಯಲ್ಲಿ ಈ ರೀತಿ ಸಂಸತ್ ಸದನ ನಡೆದಿದ್ದು ನೋಡಿಲ್ಲ:

ಕಳೆದ 60-65 ವರ್ಷಗಳ ಅವಧಿಯಲ್ಲಿ ಈ ರೀತಿ ಸಂಸತ್ ಸದನ ನಡೆದಿದ್ದು ನೋಡಿಲ್ಲ. ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ ಎಂದರು.

ಆಡಳಿತ, ವಿಪಕ್ಷಗಳು ಒಂದು ನಿಲುವಿಗೆ ಬಂದು ಸದನ ನಡೆಯುವಂತೆ ನೋಡಿಕೊಳ್ಳಬೇಕು. ನಾನು ಯಾರ ಮೇಲೂ ತಪ್ಪು ಹೊರಿಸಲು ಹೋಗಲ್ಲ ಎಂದರು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದರು.

ನನ್ನನ್ನು ಕೆಳಮಟ್ಟಕ್ಕೆ ಇಳಿಸಬೇಡಿ:

ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿಯಾದ ಬಳಿಕ ಶಾಸಕ ಪ್ರೀತಂ ಗೌಡ ಅಸಮಾಧಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಅಷ್ಟು ಕೆಳಮಟ್ಟಕ್ಕೆ ನನ್ನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ಮತ್ತೆ - ಮತ್ತೆ ಪ್ರಶ್ನೆ ಮಾಡಬೇಡಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಧ್ಯಮದವರಿಗೆ ಬೇಸರದಿಂದ ಹೇಳಿದರು.

ಎಸ್.ಆರ್. ಬೊಮ್ಮಾಯಿ ನಾನು ಉತ್ತಮ ಗೆಳೆಯರು:

ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲ್ಲ. ಯಡಿಯೂರಪ್ಪ ಮಾರ್ಗದರ್ಶನದಿಂದ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದುಕೊಂಡಿದ್ದೇನೆ. ಎಸ್.ಆರ್. ಬೊಮ್ಮಾಯಿ ನಾನು ಉತ್ತಮ ಗೆಳೆಯರು ಎಂದರು.

ನೆಲ, ಜಲ, ಭಾಷೆ ವಿಚಾರವಾಗಿ ಸಹಕಾರ:

ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರ್ಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ ಅಷ್ಟೇ. ನೆಲ, ಜಲ, ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲದಕ್ಕೂ ಸಿದ್ಧ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.