ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂದಿನಿಂದ ಅ.31 ಮಧ್ಯರಾತ್ರಿ 12 ಗಂಟೆವರೆಗೆ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಒಳಪಡುವ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಮದ್ಯದಂಗಡಿಗಳನ್ನು ಮುಚ್ಚವಂತೆ ಅಬಕಾರಿ ಆಯುಕ್ತರು ಆದೇಶ:
ಇಂದು ಮಧ್ಯಾಹ್ನ 3 ಗಂಟೆಯಿಂದ ನಾಳೆ ಮಧ್ಯರಾತ್ರಿಯವರಿಗೆ ಬಾರ್ ಅಂಡ್ ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ಅಬಕಾರಿ ಆಯುಕ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.