ಬೆಂಗಳೂರು: ಕೋವಿಡ್ 2ನೇ ಅಲೆಯ ಹಿನ್ನೆಲೆ ಸರ್ಕಾರವು ಪ್ರಯಾಣಿಕರ ವಾಹನ ತೆರಿಗೆ ಪಾವತಿಗೆ ವಿನಾಯಿತಿ ನೀಡಿದೆ.
ಲಾಕ್ಡೌನ್ನಿಂದಾಗಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದೆ.
ಈ ಹಿನ್ನೆಲೆ ರಾಜ್ಯದಲ್ಲಿ ನೋಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.