ಬೆಂಗಳೂರು: ಕೋವಿಡ್ ಹಿನ್ನೆಲೆ ಲಾಕ್‌ಡೌನ್ ಜಾರಿಗೊಳಿಸಿದ್ದ ಹಿನ್ನೆಲೆ, ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿತ್ತು. ಇದೀಗ ಕೊರೊನಾ ಪ್ರಕರಣಗಳು ಕಡಿಮೆಯಾಗಿದ್ದು, ಪ್ರೌಢಶಿಕ್ಷಣ ಹಾಗೂ ಕಾಲೇಜುಗಳನ್ನು ಪುನಾರಂಭ ಮಾಡಲಾಗಿದೆ.
ಲಾಕ್‌ಡೌನ್ ತೆರವಾದ ಕಾರಣ, ತಾಂತ್ರಿಕ- ತಾಂತ್ರಿಕೇತರ, ಸ್ನಾತಕ - ಸ್ನಾತಕೋತ್ತರ ಕಾಲೇಜುಗಳನ್ನು ಭೌತಿಕವಾಗಿ ನಡೆಸಲಾಗುತ್ತಿದೆ. ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ಪಿಹೆಚ್ಡಿ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ತರಗತಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು, 2020-21 ನೇ ಸಾಲಿನ ಸ್ಮಾರ್ಟ್‌ಕಾರ್ಡ್ ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: NSUI ಪದಾಧಿಕಾರಿಗಳ ಪದಗ್ರಹಣ: ಬಿಜೆಪಿ ವಿರುದ್ಧ ಸಿದ್ದು ಕಿಡಿ, ವಿದ್ಯಾರ್ಥಿಗಳಿಗೆ ಡಿಕೆಶಿ ಪಕ್ಷ ಪಾಠ..!
ಈ ಬಗ್ಗೆ ಎಲ್ಲ ಚಾಲನಾ ಸಿಬ್ಬಂದಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ/ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಘಟಕ ವ್ಯವಸ್ಥಾಪಕರು ಕ್ರಮಕೈಗೊಳ್ಳಬೇಕು ಅಂತಾ ಬಿಎಂಟಿಸಿ ಆದೇಶಿಸಿದೆ.