ಬೆಂಗಳೂರು: ರಾಜದಾನಿಯನಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಇದರ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 34.1 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ. ಶನಿವಾರ ಒಂದೇ ದಿನ 51 ಮಿ.ಮೀ. ಮಳೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 19.8 ಡಿಗ್ರಿ ಸೆಲ್ಸಿಯಸ್ ಇದೆ. ಇಲ್ಲಿ 23.4 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇದೆ. 22.4 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ: ಈ ವಾರ ಯಾವ ರಾಶಿಯವರಿಗಿದೆ ಅದೃಷ್ಟ..? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲ..
ಮುಂದಿನ 24 ಗಂಟೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮೇಲ್ಮೈ ಗಾಳಿಯು ಕೆಲವೊಮ್ಮೆ ಬಲವಾಗಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.