ETV Bharat / state

ಖಾತಾ ಅರ್ಜಿ ತ್ವರಿತಗತಿ ವಿಲೇವಾರಿ: ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿ 3 ದಿನಗಳ ಖಾತಾ ಮೇಳಕ್ಕೆ ಚಾಲನೆ..

author img

By

Published : Feb 4, 2023, 6:17 AM IST

ಬೆಂಗಳೂರು ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿ ನಡೆದ 3 ದಿನಗಳ ಖಾತಾ ಮೇಳಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಜಯರಾಮ್ ರಾಯಪುರ ಚಾಲನೆ ನೀಡಿದರು.

Bangalore BBMP South Zone coverage 3 days Kata Mela
ಬೆಂಗಳೂರು ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿ 3 ದಿನಗಳ ಖಾತಾ ಮೇಳ
ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿ 3 ದಿನಗಳ ಖಾತಾ ಮೇಳ

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ 3 ದಿನಗಳ ಕಾಲ ಖಾತಾ ಮೇಳವನ್ನು ಆಯೋಜಿಸಿದ್ದು, ಎಲ್ಲರೂ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರಾದ ಜಯರಾಮ್ ರಾಯಪುರ ಹೇಳಿದರು.

ತ್ವರಿತಗತಿ ವಿಲೇವಾರಿಗೆ ಖಾತಾ ಮೇಳ: ದಕ್ಷಿಣ ವಲಯ ವ್ಯಾಪ್ತಿಯ ಬಿಟಿಎಂ 2ನೇ ಹಂತದ ಬಳಿ ಬರುವ ಗ್ರೀನ್ ಸಿಟಿ ಅಪಾರ್ಟ್ಮೆಂಟ್ ನಲ್ಲಿ ಆಯೋಜಿಸಿದ್ದ ಖಾತಾ ಮೇಳಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪಾಲಿಕೆಯಿಂದ ಆಸ್ತಿ ತೆರಿಗೆ ಹಾಗೂ ಖಾತೆ ಮಾಡಿಕೊಡುವ ವಿಚಾರದಲ್ಲಿ ನಾಗರಿಕರಲ್ಲಿ ಅಸಮಾಧಾನಗಳಿವೆ. ಆ ಬಗ್ಗೆ ದೂರುಗಳು ಕೂಡಾ ಕೇಳಿ ಬರುತ್ತವೆ. ಈ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ಖಾತಾ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

3 ದಿನಗಳಲ್ಲಿ ಇನ್ನುಳಿದ ಬಾಕಿ ಅರ್ಜಿಗಳ ವಿಲೇವಾರಿ: ಪಾಲಿಕೆ ವ್ಯಾಪ್ತಿಯಲ್ಲಿ ಸಕಾಲ ತಂತ್ರಾಂಶದಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಎಲ್ಲಾ ಚಟುವಟಿಕೆಗಳು ಪೂರ್ಣಗೊಳ್ಳಬೇಕು. ಈ ನಿಟ್ಟಿನಲ್ಲಿ ದಕ್ಷಿಣ ವಲಯದಲ್ಲಿ 317 ಖಾತಾಗೆ ಸಂಬಂಧಿಸಿದ ಅರ್ಜಿಗಳು ವಿಲೇವಾರಿಗೆ ಬಾಕಿಯಿತ್ತು. ಖಾತಾ ಮೇಳ ಮಾಡುತ್ತೇವೆ ಎಂಬ ವಿಷಯ ತಿಳಿದ ಬಳಿಕ 317 ಅರ್ಜಿಗಳ ಪೈಕಿ 250 ಅರ್ಜಿಗಳು ಮಾತ್ರ ಬಾಕಿಯಿದ್ದು, ಈ 3 ದಿನಗಳಲ್ಲಿ ಇನ್ನುಳಿದ ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಖಾತಾ ಮೇಳದಲ್ಲಿ ಆಸ್ತಿ ತೆರಿಗೆ ಪಾವತಿಸಿ: ದಕ್ಷಿಣ ವಲಯ ವ್ಯಾಪ್ತಿ ನಡೆದ ಖಾತಾ ಮೇಳದಲ್ಲಿ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗತಿ ಮಾಡಲಾಗುತ್ತಿದೆ. ಇದರೊಂದಿಗೆ ಖಾತಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಖಾತಾ ವಿಲೇವಾರಿ ಮಾಡಲಾಗುವುದು. ಆಸ್ತಿ ತೆರಿಗೆ ಪಾವತಿಸಬೇಕೆಂದುಕೊಳ್ಳುವವರಿಗೆ ಖಾತಾ ಮೇಳದಲ್ಲಿ ತೆರಿಗೆ ರಸೀದಿಯನ್ನು ಸ್ಥಳದಲ್ಲಿಯೇ ನೀಡಲಾಗುತ್ತದೆ ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರವಾರು ಖಾತಾ ಮೇಳ: ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಖಾತಾ ಮೇಳೆ ಆಯೋಜನೆ ಮಾಡಲಾಗಿದೆ. ಖಾತೆ ಹಾಗೂ ಖಾತೆಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಗಾಗಿ ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಖಾತೆ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಕುಂದುಕೊರತೆಗಳಿಗೂ ಪರಿಹಾರ: ಖಾತಾ ಮೇಳದಲ್ಲಿ ಖಾತೆಗಳಿಗೆ ಸಂಬಂಧಿಸಿದ ವಿಚಾರವನ್ನು ಹೊರತುಪಡಿಸಿ ಬೇರೆ ಸಮಸ್ಯೆಗಳಿದ್ದರೂ ತಿಳಿಸಲು ಸ್ಥಳದಲ್ಲಿ ಉಪಸ್ಥಿತರಿದ್ದ ನಾಗರಿಕರಿಗೆ ತಿಳಿಸಿದರು. ಈ ವೇಳೆ ಗ್ರೀನ್ ಸಿಟಿ ಅಪಾರ್ಟ್ಮೆಂಟ್ ಗೇಟ್ ಬಳಿ ಕಸ ಹಾಕುವುದು ಹಾಗೂ ಮೂತ್ರ ವಿಸರ್ಜನೆ ಮಾಡುವುದು.

ಬಿಟಿಎಂ 2ನೇ ಹಂತದ ರಸ್ತೆ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗಗಗಳನ್ನು ಒತ್ತುವರಿ ಮಾಡಿಕೊಂಡಿರುವುದು ಹಾಗೂ ವಾಹನಗಳು ಪಾರ್ಕಿಂಗ್ ಮಾಡಿರುವುದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆಯಾಗಿದ್ದು ಹಾಗೂ ಬೀದಿ ದೀಪಗಳು ಇಲ್ಲಿದಿರುವ ಕಡೆ ಸರಿಪಡಿಸಲು ಮನವಿ ಮಾಡಿದರು.

ಬ್ಲಾಕ್ ಸ್ಪಾಟ್ ಇಲ್ಲದಂತೆ ಕ್ರಮ: ನಾಗರಿಕರ ಪ್ರಶ್ನೆಗಳಿಗೆ ವಲಯ ಆಯುಕ್ತರು ಪ್ರತಿಕ್ರಿಯೆಸಿ, ನಗರದಲ್ಲಿ ಎಲ್ಲೂ ಬ್ಲಾಕ್ ಸ್ಪಾಟ್(ಕಸ ಸುರಿಯುವ ಸ್ಥಳ)ಗಳು ಇಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರೀನ್ ಸಿಟಿ ಅಪಾರ್ಟ್ಮೆಂಟ್ ಬಳಿ ಕಸ ಹಾಕುವ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಇತ್ಯರ್ಥಪಡಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕವಾಗಿ ವ್ಯಾಪಾರ ಮಾಡಲು ಹಾಕಿಂಗ್ ಜೋನ್ ಮಾಡಬೇಕಿದ್ದು, ಅದಕ್ಕೆ ಸೂಕ್ತ ಸ್ಥಳದ ಅವಶ್ಯಕತೆಯಿದೆ. ಇನ್ನು, ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂಓದಿ :ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ​: ತಂದೆಯನ್ನು ಹೆಗಲ ಮೇಲೆ ಹೊತ್ತು ಶಾಸಕರ ಮನೆಗೆ ಬಂದ ಮಗಳು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.