ಬೆಂಗಳೂರು : ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯವಾಗಿದ್ದು, ಮತ್ತೆ ಚಳಿ ಕಾಣಿಸಿದೆ. ಚಳಿ ಮುಂದಿನ ಒಂದು ವಾರ ಇರಲಿದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ: ನಮ್ಮ ದೇಶದಲ್ಲಿ ಅನಿಮಲ್ ಕಾನೂನು ಕಟ್ಟುನಿಟ್ಟು ಇಲ್ಲ: ನಟಿ ರಮ್ಯಾ
ನಂತರ ಕ್ರಮೇಣ ಇಳಿಕೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ತಾಪಮಾನ ಸರಾಸರಿ 3 ರಿಂದ 4 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆಯ ತಜ್ಞರು ಹೇಳಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಶುಭ ವಾತಾವರಣ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಉತ್ತರದಿಂದ ದಕ್ಷಿಣ ಕಡೆಗೆ ಬೀಸುತ್ತಿರುವ ಗಾಳಿಯೂ ನೇರವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಮೇಲೆ ಪರಿಣಾಮ ಬೀರುವುದರಿಂದ ಚಳಿ ಕಾಣಿಸಿದೆ ಎಂದು ತಜ್ಞರು ಹೇಳಿದ್ದಾರೆ.