ETV Bharat / state

ವೃತ್ತಿಪರ ಕೋರ್ಸ್​ಗಳಿಗೆ ಸಿಇಟಿ ಪರೀಕ್ಷೆ: ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ - ವೃತ್ತಿಪರ ಕೋರ್ಸ್

ಸಿಇಟಿ ಪರೀಕ್ಷೆ ಬರೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Extension of CET Exam Date for Professional Courses
ವೃತ್ತಿಪರ ಕೋರ್ಸ್​ಗಳಿಗೆ ನಡೆಯುವ ಸಿಇಟಿ ಪರೀಕ್ಷೆ ದಿನಾಂಕ ವಿಸ್ತರಣೆ
author img

By

Published : Jul 9, 2021, 7:17 PM IST

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ ಪರೀಕ್ಷೆಯು ಆಗಸ್ಟ್ ಅಂತ್ಯದಲ್ಲಿ ನಡೆಯಲಿದೆ. ಪರೀಕ್ಷೆ ಬರೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಇಎ (ಕರ್ನಾಟಕದ ಪರೀಕ್ಷಾ ಪ್ರಾಧಿಕಾರ)ಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14 ರಿಂದ 20 ರವರೆಗೆ ಅವಕಾಶ ನೀಡಲಾಗಿದೆ.

ಎನ್‌ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ವರ್ಗಗಳನ್ನು ಕ್ಲೇಮ್‌ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ, http://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ವಿವರ ಪಡೆಯಬಹುದು.

ಇದನ್ನೂ ಓದಿ: ಪಿಹೆಚ್‌ಡಿ ವಿದ್ಯಾರ್ಥಿನಿಯಿಂದ ಲಂಚ ಸ್ವೀಕಾರ: ಮಂಗಳೂರು ವಿವಿ ಸಹಾಯಕ ಪ್ರೊಫೆಸರ್​ಗೆ 5 ವರ್ಷ ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.