ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸ್ಕ್ಯಾನ್ ಪ್ರತಿ ಪಡೆಯಲು ಮರು ಮೌಲ್ಯಮಾಪನ - ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಬಹುದು.
* ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಲು - ಅಕ್ಟೋಬರ್ 20 ರಿಂದ 23ರವರೆಗೆ
* ಸ್ಕ್ಯಾನ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು - ಅಕ್ಟೋಬರ್ 27 ರಿಂದ 29 ರವರೆಗೆ
* ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ( ಸ್ಕ್ಯಾನ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಅವಕಾಶವಿರುತ್ತೆ) ನವೆಂಬರ್ 2 ರಿಂದ ನವೆಂಬರ್ 5ರವರೆಗೆ ಕಾಲಾವಕಾಶವಿದೆ.