ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ 2021-22ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಇದೀಗ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಆಗಸ್ಟ್ 2ರ ಮಧ್ಯಾಹ್ನ 12ರಿಂದ 7ರ ತನಕ ಸಂಜೆ 5 ಗಂಟೆ ತನಕ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್‌ಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಅರ್ಜಿ ನಮೂನೆ FORM-1ರಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ.
ಜಂಟಿ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ www.pue.kar.nic.in ಇಲ್ಲಿಂದ ಲಾಗಿನ್ ಆಗಿ ಪಡೆಯಬಹುದು.