ETV Bharat / state

ಅನುದಾನಿತ, ಅನುದಾನರಹಿತ ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಅವಕಾಶ ವಿಸ್ತರಣೆ

ರಾಜ್ಯದ ಎಲ್ಲ ಖಾಸಗಿ ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಕಾಲಾವಕಾಶವನ್ನು ನವೆಂಬರ್ 15 ರವರೆಗೆ ವಿಸ್ತರಣೆ ಮಾಡಲಾಗಿದೆ.

Etv Bharatextension-of-opportunity-for-renewal-of-accreditation-of-aided-and-unaided-colleges
ಅನುದಾನಿತ, ಅನುದಾನರಹಿತ ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಅವಕಾಶ ವಿಸ್ತರಣೆ
author img

By ETV Bharat Karnataka Team

Published : Nov 8, 2023, 10:44 PM IST

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ (ಪದವಿಯಿಂದ ವಿಭಜನೆಗೊಂಡ ಪದವಿ ಪೂರ್ವ ಕಾಲೇಜುಗಳು ಒಳಗೊಂಡಂತೆ) ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಕಾಲಾವಕಾಶವನ್ನು ನವೆಂಬರ್ 15 ರವರೆಗೆ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ವಿಸ್ತರಣೆ ಮಾಡಿದ್ದು, ಮತ್ತೊಮ್ಮೆ ಕಾಲಾವಕಾಶ ವಿಸ್ತರಣೆ ಮಾಡುವುದಿಲ್ಲ ಹಾಗಾಗಿ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 7ರನ್ವಯ 2017-18 ರಿಂದ 2023-24ನೇ ಸಾಲಿನವರೆಗಿನ ಖಾಸಗಿ ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ (ಪದವಿಯಿಂದ ವಿಭಜನೆಗೊಂಡ ಪದವಿ ಪೂರ್ವ ಕಾಲೇಜುಗಳು ಒಳಗೊಂಡಂತೆ) ಮಾನ್ಯತೆ ನವೀಕರಣಕ್ಕೆ ಅರ್ಜಿಗಳನ್ನು ಆಗಸ್ಟ್ 1 ರಿಂದ ಆನ್ ಲೈನ್ ನಲ್ಲಿ ಆಹ್ವಾನಿಸಿದ್ದು, ಪ್ರಸ್ತುತ ಹಲವಾರು ಕಾಲೇಜಿನ ಆಡಳಿತ ಮಂಡಳಿಯವರ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ. ಹಾಗೂ ದಿನಾಂಕವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ತಿಳಿಸಿದೆ.

ರಾಜ್ಯದ ಎಲ್ಲ ಖಾಸಗಿ ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ(ಪದವಿಯಿಂದ ವಿಭಜನೆಗೊಂಡ ಪದವಿ ಪೂರ್ವ ಕಾಲೇಜುಗಳು ಒಳಗೊಂಡಂತೆ) ಮಾನ್ಯತೆ ನವೀಕರಣಕ್ಕೆ ಅರ್ಜಿಯನ್ನು ನಿಗದಿತ ಸಮಯದೊಳಗೆ ಸಲ್ಲಿಸಲು ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ನವೆಂಬರ್ 26 ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ತಿಳಿಸಿದ್ದರು. ತಮ್ಮ ನಿವಾಸದಲ್ಲಿ ಮಾತನಾಡಿದ್ದ ಅವರು, ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ 1208 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

ಮುಖ್ಯಮಂತ್ರಿಗಳ ಸಹಕಾರದಿಂದ ಕೈಗೊಂಡ ಈ ಕ್ರಮದಿಂದಾಗಿ ಈ ಮೊದಲು ಉಂಟಾಗಿದಂತಹ ಎಲ್ಲ ಸಮಸ್ಯೆಗಳು ಪರಿಹಾರಗೊಂಡಿದೆ. ಇದರಿಂದ ನೂರಾರು ಕುಟುಂಬಗಳ ಬದುಕು ಹಸನಾಗಲಿದೆ. ಇನ್ನೂ ಕೆಲವೇ ದಿನಗಳಲ್ಲಿ ನೀವು ಸರ್ಕಾರದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಕಡ್ಡಾಯವಾಗಿ ಗ್ರಾಮೀಣ ಭಾಗಕ್ಕೆ ತೆರಲಿ ತಮ್ಮ ವೃತ್ತಿ ಆರಂಭಿಸಿ, ವರ್ಗಾವಣೆಗಾಗಿ ಒತ್ತಡ ಹೇರುವ ಕೆಲಸ ಮಾಡಬೇಡಿ. ನಾನು ನಿಮ್ಮಿಂದ ಇದನ್ನು ಅಷ್ಟೇ ನಿರೀಕ್ಷಿಸುತ್ತೇನೆ ಎಂದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.