ಬೆಂಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳ ಕೆಲಸದ ವೇಳೆಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![ರಾಜ್ಯ ಸರ್ಕಾರದ ಆದೇಶ ಪ್ರತಿ](https://etvbharatimages.akamaized.net/etvbharat/prod-images/kn-bng-09-state-government-order-extending-timings-o-subregister-offices-ka10032_15022022205434_1502f_1644938674_427.jpg)
ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯಲ್ಲಿನ ನೋಂದಣಿ ಕಚೇರಿಗಳು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಕಾರ್ಯ ನಿರ್ವಹಿಸುತ್ತಿದ್ದವು. ಕಚೇರಿಗಳಲ್ಲಿನ ಜನಸಂದಣಿ ಪರಿಗಣಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲ ಬದಲಾವಣೆಗಳನ್ನು ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ ಪಿಯುಸಿ, ಪದವಿ ತರಗತಿಗಳು ಆರಂಭ
ಕರ್ನಾಟಕ ನೋಂದಣಿ ನಿಯಮಗಳು 1965ರ ನಿಯಮ 4(1)ರನ್ವಯ ಉಪಬಂಧದ ವಿವರಣೆಯಂತೆ ನೋಂದಣಿ ಮತ್ತು ಸಾಂಖಿಕ ಇಲಾಖೆಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳ ಕೆಲಸದ ವೇಳೆಯನ್ನು, ಮುಂದಿನ ಆದೇಶದವರೆಗೆ ಬೆಳಗ್ಗೆ 9.00 ರಿಂದ ರಾತ್ರಿ 7.00 ರ ತನಕ ತಕ್ಷಣ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶಿಸಿದೆ.