ETV Bharat / state

ಮಲ್ಲೇಶ್ವರಂ ಮಾದರಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಸ್ತರಣೆ: ಸಿಎಂ ಬೊಮ್ಮಾಯಿ - Cm Bommai

ನಾಡಿನ ಭವ್ಯ ಭವಿಷ್ಯಕ್ಕೆ ತಂತ್ರಜ್ಞಾನ, ನೈತಿಕತೆ, ವಿಜ್ಞಾನ ಸಹಾಯಕ. ಶಾಲೆಗಳಲ್ಲಿ ಬಹುಪಯೋಗಿ ಸ್ಯಾಟಲೈಟ್ ನಿರ್ಮಾಣ ಮಾಡುವ ಅವಕಾಶವಿದ್ದು, ಅಗತ್ಯವಿರುವ ತರಬೇತಿ, ವಿನ್ಯಾಸಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

Puneeth Satellite Work Station was inaugurated by CM
ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ
author img

By

Published : Oct 29, 2022, 7:23 PM IST

ಬೆಂಗಳೂರು: ಆಧುನಿಕ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಲ್ಲೇಶ್ವರಂ ಮಾದರಿಯನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಇರುವ ಸರ್ಕಾರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಲ್ಲೇಶ್ವರಂ ಸ್ಕೂಲ್ ಮಾಡೆಲ್ ಹಾಗೂ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿ ಮಾತನಾಡಿದ ಅವರು, ಮಲ್ಲೇಶ್ವರಂ ಮಾದರಿ ಶಾಲೆಯಲ್ಲಿ ಮಕ್ಕಳೇ ತಯಾರಿಸಿರುವ ಸ್ಯಾಟಲೈಟ್ ಇಂದು ಅನಾವರಣವಾಗಿದೆ. ಪುನೀತ್ ರಾಜಕುಮಾರ್ ಹೆಸರಿನಲ್ಲಿ ಆಗಿದ್ದು, ಬಹಳ ಯೋಗ್ಯ ವ್ಯಕ್ತಿಯ ಹೆಸರಿನಲ್ಲಿ ಕೆಲಸವಾಗುತ್ತಿದೆ ಎಂದರು.

Puneeth Satellite Work Station was inaugurated by CM
ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ

ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ: ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆಯಂದು ಅವರಿಗೆ ಗೌರವ ಸಮರ್ಪಣೆ ಮಾಡುವ ರೀತಿಯಲ್ಲಿ ಈ ಸ್ಯಾಟಲೈಟ್ ಅನ್ನು ಗಗನಕ್ಕೇರಿಸುವ ಕೆಲಸ ಶ್ಲಾಘನೀಯ. ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ ಎಂದರು.

ಪುನೀತ್ ರಾಜ್ ಕುಮಾರ್ ಸದಾ ಹೊಸತನ್ನು ಹುಡುಕುವ, ಪ್ರಯೋಗಶೀಲ, ಅಂತಃಕರಣವುಳ್ಳ ವ್ಯಕ್ತಿ. ಅತ್ಯಂತ ಸಣ್ಣ ವಯಸ್ಸಿನಲ್ಲೇ ಈ ಲೋಕ ಬಿಟ್ಟರೂ ಬದುಕಿದ ಕೆಲ ದಿನಗಳಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಭೂಮಿಯಲ್ಲಿ ಬಿಟ್ಟುಹೋಗಿದ್ದಾರೆ. ಪರೋಪಕಾರಿ ಕಾರ್ಯಗಳು, ವಿದ್ಯಾಭ್ಯಾಸ ನೀಡುವ ಸಂಸ್ಥೆ, ಅನಾಥ ಮಕ್ಕಳ ಶಕ್ತಿ ಧಾಮ, ಸಹಾಯ, ನಗುಮುಖದಿಂದ ಎಲ್ಲರ ದುಃಖ ದುಮ್ಮಾನಗಳನ್ನು ದೂರ ಮಾಡಿದ್ದಾರೆ. ನಮ್ಮ ಜೊತೆಗೆ ಎಂದಿಗೂ ಇರುತ್ತಾರೆ. ರಾಜ್ಯದ ಉದ್ದಗಲಕ್ಕೂ ಖ್ಯಾತಿ ಪಸರಿಸಿದೆ. ಮಲ್ಲೇಶ್ವರಂ ಶಾಲೆ ಪುನೀತ್ ಖ್ಯಾತಿಯನ್ನು ಸ್ಯಾಟಲೈಟ್ ಮೂಲಕ ಆಕಾಶದೆತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ನಂಬಿದ್ದೇನೆ ಎಂದರು.

ಪ್ರಾಥಮಿಕ ಶಿಕ್ಷಣದಲ್ಲಿ ನೈತಿಕ ಮೌಲ್ಯ: ಶಿಕ್ಷಣ ಬಹಳ ಮುಖ್ಯ. 21ನೇ ಶತಮಾನ ಜ್ಞಾನದ ಶತಮಾನ. ಜ್ಞಾನಾರ್ಜನೆ ಬಹಳ ಮುಖ್ಯವಾಗುತ್ತದೆ. ಕಲಿಯುವಾಗ ಗುಣಾತ್ಮಕ ಹಾಗೂ ನೈತಿಕ ವಿದ್ಯೆಯನ್ನು ಕಲಿಯಬೇಕು. ವಿಜ್ಞಾನ ಮತ್ತು ಗಣಿತವನ್ನು ಎಲ್ಲರೂ ಕಲಿಯಲೇಬೇಕು. ಎಲ್ಲರ ಜೀವನದಲ್ಲಿ ಇವು ಉಪಯೋಗಕ್ಕೆ ಬರುತ್ತವೆ. ವಿಜ್ಞಾನ ಮತ್ತು ಗಣಿತದಲ್ಲಿ ಭದ್ರ ಬುನಾದಿ ಹಾಕಲು ಭಾಷೆಯಲ್ಲಿಯೂ ಭದ್ರ ಬುನಾದಿಯನ್ನು ಹಾಕಬೇಕು.

ಮಾತೃಭಾಷೆ ಸಹಜವಾಗಿ ಬರುವ ಭಾಷೆ. ಅದನ್ನು ಅಚ್ಚುಕಟ್ಟಾಗಿ ಕಲಿತರೆ ನಮ್ಮ ಜ್ಞಾನ ಉತ್ತಮಗೊಳ್ಳುತ್ತದೆ. ಪ್ರಶ್ನೆ ಕೇಳುವ ಹಕ್ಕು ಮಕ್ಕಳಿಗಿದೆ. ಮಕ್ಕಳು ಪ್ರಶ್ನೆ ಕೇಳಬೇಕು. ಶಿಕ್ಷಕರು ಕಲಿತು ಮಕ್ಕಳ ಉತ್ಸಾಹವನ್ನು ಪ್ರೋತ್ಸಾಹ ಮಾಡಬೇಕು. ಮಕ್ಕಳ ಗ್ರಹಣಶಕ್ತಿ ಹೆಚ್ಚಿರುವುದರಿಂದ ನೈತಿಕ ಮೌಲ್ಯ, ಭಾಷೆ, ವಿಜ್ಞಾನ ಹಾಗೂ ಗಣಿತವನ್ನು ಮೂಲಭೂತವಾಗಿ ಪ್ರಾಥಮಿಕ ಶಿಕ್ಷಣದಲ್ಲಿ ಕಲಿಸಬೇಕು. ಉನ್ನತ ಶಿಕ್ಷಣ ಕಲಿಯುವಾಗ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು.

ತರ್ಕಬದ್ಧವಾಗಿ ಆಲೋಚಿಸಿ: ಮಕ್ಕಳು ತರ್ಕಬದ್ಧವಾಗಿ ಯೋಚಿಸಬೇಕು. ಯಾಕೆ?, ಏನು?, ಎಲ್ಲಿ?, ಹೇಗೆ ಎಂದು ಪ್ರಶ್ನಿಸಬೇಕು. ಆಗ ತರ್ಕಬದ್ಧವಾಗಿ ಯೋಚಿಸಬಹುದು. ಬಾಯಿಪಾಠದ ಅಗತ್ಯವಿರುವುದಿಲ್ಲ. ಈ ಪಂಚಪ್ರಶ್ನೆಗಳು ಮಕ್ಕಳ ಯಶಸ್ಸಿನ ಮೆಟ್ಟಿಲುಗಳು. ಕಠಿಣ ಗಣಿತವನ್ನು ನಾಲ್ಕು ಜನರಿಗೆ ಹೇಳಿಕೊಟ್ಟರೆ, ಅದನ್ನು ಮರೆಯುವ ಪ್ರಮೇಯವೇ ಇರುವುದಿಲ್ಲ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಉಜ್ವಲ ಭವಿಷ್ಯ: ಮಕ್ಕಳನ್ನು ಕಂಡಾಗ ಭಾರತ ಹಾಗೂ ಕನ್ನಡ ನಾಡಿನ ಭವಿಷ್ಯ ಉಜ್ವಲವಾಗಿದೆ ಎಂದು ಅನಿಸುತ್ತದೆ. ಮಕ್ಕಳಲ್ಲಿ ಉತ್ಸಾಹ, ಕುತೂಹಲ ಬಹಳ ಮುಖ್ಯ. ಮಕ್ಕಳಲ್ಲಿ ಕುತೂಹಲ ಹಾಗೂ ಮುಗ್ಧತೆ ಎರಡನ್ನೂ ಜೀವಂತವಾಗಿಡುವ ಶಿಕ್ಷಕ ನಂಬರ್ ಒನ್ ಗುರುವಾಗುತ್ತಾರೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಸ್ಯಾಟಲೈಟ್ ನಿರ್ಮಾಣಕ್ಕೆ ಸರ್ಕಾರದ ಸಹಾಯ: ವಿದ್ಯೆ ಶಕ್ತಿ ಮತ್ತು ಅವಕಾಶಗಳನ್ನು ನೀಡುತ್ತದೆ. ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ವಿದ್ಯೆ ಕಲಿಸಿದ ವಿನಯವನ್ನು ಬಿಟ್ಟುಕೊಡಬಾರದು. ಇತರರಿಗಾಗಿ ಬದುಕಿದಾಗ ಸುಖ, ಶಾಂತಿ, ನೆಮ್ಮದಿಯ ಬದುಕು ನಮ್ಮದಾಗುತ್ತದೆ. ನಾಡಿನ ಭವ್ಯ ಭವಿಷ್ಯಕ್ಕೆ ತಂತ್ರಜ್ಞಾನ, ನೈತಿಕತೆ, ವಿಜ್ಞಾನ ಸಹಾಯಕ. ಶಾಲೆಗಳಲ್ಲಿ ಬಹುಪಯೋಗಿ ಸ್ಯಾಟಲೈಟ್ ನಿರ್ಮಾಣ ಮಾಡುವ ಅವಕಾಶವಿದ್ದು, ಅಗತ್ಯವಿರುವ ತರಬೇತಿ, ವಿನ್ಯಾಸಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದರು.

ಮಲ್ಲೇಶ್ವರಂ ಎಂಬ ಕುಟುಂಬದ ಮುಖ್ಯಸ್ಥ: ಸಿ.ಎನ್. ಅಶ್ವತ್ಥ ನಾರಾಯಣ್ ಮಲ್ಲೇಶ್ವರಂ ಎಂಬ ಕುಟುಂಬದ ಮುಖ್ಯಸ್ಥನಂತೆ ಕೆಲಸ ಮಾಡುತ್ತಿದ್ದಾರೆ. ಅಂತಃಕರಣ ಎನ್ನುವುದು ಬಹಳ ಮುಖ್ಯ. ನಮಗೆ ಹುಟ್ಟಿದ ಮಕ್ಕಳು ಮಾತ್ರ ನಮ್ಮ ಮಕ್ಕಳು ಎನ್ನುವುದು ಸಂಕುಚಿತ ಭಾವನೆ. ನನ್ನ ಕ್ಷೇತ್ರದ ಎಲ್ಲಾ ಮಕ್ಕಳೂ ನನ್ನ ಮಕ್ಕಳು ಎಂದು ತಿಳಿದು, ಆ ಮಕ್ಕಳ ಭವಿಷ್ಯಕ್ಕೆ ಶಾಲೆಗಳ ಅಭಿವೃದ್ಧಿ ಮಾಡುವುದು. ಕೇವಲ ಕಟ್ಟಡಗಳು ಮಾತ್ರವಲ್ಲ ಕಲಿಕಾ ವ್ಯವಸ್ಥೆ, ಆಧುನೀಕರಣ, ಡಿಜಿಟಲೀಕರಣ, ಅಗತ್ಯವಿರುವ ವೈಫೈ, ಬ್ರಾಡ್ ಬ್ಯಾಂಡ್ ಮುಂತಾದ ವ್ಯವಸ್ಥೆ, ಶಿಕ್ಷಕರನ್ನು ತಯಾರಿಸಿ, ಕಲಿಕೆಯಲ್ಲಿ ಆಸಕ್ತಿ ಹುಟ್ಟಿಸಿ ಮಕ್ಕಳ ಬುದ್ಧಿಶಕ್ತಿ, ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗುತ್ತಿದೆ. ಇದು ಇಡೀ ರಾಜ್ಯಕ್ಕೇ ಈ ಶಾಲೆಯನ್ನು ಮಾದರಿಯಾಗಿಸಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಬೆಳ್ಳಿ ಪರದೆ ಮೇಲೆ ಮಿಂಚಿ ಮರೆಯಾದ ಪುನೀತ್.. ಅಪ್ಪು ಅಭಿನಯಿಸಿದ ಪಾತ್ರಗಳೆಲ್ಲಾ ವಿಭಿನ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.