ETV Bharat / state

ವಿವಾಹೇತರ ಸಂಬಂಧ : ಇಬ್ಬರ ಸಾವಿಗೆ ಕಾರಣವಾಗಿದ್ದ ಆರೋಪಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿ ಮತ್ತು ಅವರ ತಂದೆಯ ಸಾವಿಗೆ ಕಾರಣವಾಗಿದ್ದವನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ.

illicit-relationship-with-wife-high-court-upheld-the-life-sentence-of-the-accused
ಪತ್ನಿಯೊಂದಿಗೆ ಅಕ್ರಮ ಸಂಬಂಧ : ಇಬ್ಬರ ಸಾವಿಗೆ ಕಾರಣವಾಗಿದ್ದ ಆರೋಪಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
author img

By ETV Bharat Karnataka Team

Published : Dec 6, 2023, 6:01 PM IST

Updated : Dec 6, 2023, 6:11 PM IST

ಬೆಂಗಳೂರು : ತನ್ನ ಪತ್ನಿಯೊಂದಿಗೆ ವಿವಾಹೇತರ ಸಂಬಂಧವನ್ನಿಟ್ಟುಕೊಂಡಿದ್ದ ವ್ಯಕ್ತಿ, ಮತ್ತವನ ತಂದೆಯನ್ನು ಕೊಲೆ ಮಾಡಿದ್ದ ಪ್ರಕರಣದ ತಪ್ಪಿತಸ್ಥನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ(ಹೆಸರು ಬದಲಿಸಲಾಗಿದೆ) ಎಂಬಾತ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಮೇಲ್ಮನವಿದಾರರು ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಬದಲಾಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದ ಕಾರಣ ಘಟನೆಗೂ ಅರ್ಜಿದಾರರಿಗೂ ಸಂಬಂಧವಿರುವುದು ಸಾಬೀತಾಗಿದೆ ಎಂದು ಪೀಠ ತಿಳಿಸಿದೆ. ಇದೇ ವೇಳೆ ಈ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಉದ್ದೇಶಪೂರ್ವಕವಲ್ಲ ಎಂಬುದಾಗಿ ವಾದಿಸಿದ್ದ ಮೇಲ್ಮನವಿದಾರರ ವಾದವನ್ನು ನ್ಯಾಯಪೀಠ ತಳ್ಳಿಹಾಕಿದೆ.

ಆದರೆ, ಪ್ರಕರಣದಲ್ಲಿ ಗಾಯಗೊಂಡಿರುವ ವ್ಯಕ್ತಿಗಳಿಗೆ ನೆರವಾಗುವುದಕ್ಕೆ ಬದಲಾಗಿ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇದೇ ಸಂದರ್ಭದಲ್ಲಿ ಸಂತ್ರಸ್ತರ ಮೇಲೆ ತಕ್ಷಣ ಹಲ್ಲೆ ನಡೆಸಿದ್ದಾನೆ ಎಂಬುದಾಗಿ ವರದಿಯಾಗಿದೆ. ಅಷ್ಟೇ ಅಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವಾಹನವೂ ಆರೋಪಿ ಘಟನೆಗೂ ಒಂದು ತಿಂಗಳ ಹಿಂದೆ ಖರೀದಿ ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ಸಾಕ್ಷ್ಯಾಧಾರಗಳನ್ನು ವಿಚಾರಣಾ ನ್ಯಾಯಾಲಯ ಗಂಭೀರವಾಗಿ ಪರಿಶೀಲಿಸಿ ಶಿಕ್ಷೆ ವಿಧಿಸಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಪೀಠ, ಮೇಲ್ಮನವಿದಾರರ ಪತ್ನಿ ಮತ್ತು ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ನಡುವೆ ವಿವಾಹೇತರ ಸಂಬಂಧವಿದೆ ಎಂದು ಸಾಕ್ಷ್ಯಾಧಾರಗಳಲ್ಲಿ ವಿವರವಾಗಿ ತಿಳಿಸಲಾಗಿದೆ. ಇದೇ ಕಾರಣದಿಂದ ಗಲಾಟೆ ನಡೆದು ಅರ್ಜಿದಾರರ ಪತ್ನಿ ಗಂಡನಿಂದ ದೂರವಾಗಿದ್ದಳು. ಈ ಎಲ್ಲ ಬೆಳವಣಿಗೆಗಳು ಮೃತರು ಮತ್ತು ಮೇಲ್ಮನವಿದಾರರ ನಡುವೆ ದ್ವೇಷಕ್ಕೆ ಕಾರಣವಾಗಿತ್ತು. ಇದೇ ಕಾರಣದಿಂದ ಕೊಲೆ ಮಾಡಿದ್ದಾರೆ ಎಂದು ಪೀಠ ಹೇಳಿದೆ. ಅಲ್ಲದೆ, ಮೇಲ್ಮನವಿದಾರರು ದ್ವೇಷವುಳ್ಳವರನ್ನು ಮಾತ್ರವಲ್ಲದೇ ಅವರ ತಂದೆಗೂ ರಸ್ತೆ ಅಪಘಾತ ಮಾಡಿದ್ದಾರೆ. ಘಟನೆಯಿಂದ ಇಬ್ಬರು ಜೀವ ಬಿಟ್ಟಿದ್ದಾರೆ. ಆದ್ದರಿಂದ ಅರ್ಜಿ ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಅರ್ಜಿದಾರರ ಮಾಲೀಕತ್ವದ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡು ಮೃತಪಟ್ಟಿದ್ದರು (ಒಬ್ಬರು ಆರೋಪಿಯ ಪತ್ನಿಯೊಂದಿಗೆ ವಿವಾಹಯೇತರ ಸಂಬಂಧ ಹೊಂದಿದ್ದ ಆರೋಪವಿತ್ತು). ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಅರ್ಜಿದಾರರ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ : ವಿಧಾನಸಭೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಗದ್ದಲ

Last Updated : Dec 6, 2023, 6:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.