ETV Bharat / state

Facebook: ನಕಲಿ ಖಾತೆಗಳ ಕುರಿತು ತನಿಖೆಗೆ ಸಹಕಾರ ನೀಡದಿದ್ದಲ್ಲಿ ಫೇಸ್​​​ಬುಕ್​​​​​ ಸ್ಥಗಿತಗೊಳಿಸಬೇಕಾಗುತ್ತದೆ... ಹೈಕೋರ್ಟ್ ಎಚ್ಚರಿಕೆ - ಫೇಸ್ಬುಕ್ ನಕಲಿ ಖಾತೆಗಳು

ಸೌದಿ ಅರೇಬಿಯಾ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಆರೋಪದ ಮೇಲೆ ಮಂಗಳೂರು ಮೂಲದ ಶೈಲೇಶ್ ಕುಮಾರ್​ ಶಿಕ್ಷೆಗೆ ಗುರಿಯಾಗಿರುವ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡಿದಿದ್ದಲ್ಲಿ ಭಾರತದಲ್ಲಿ ಫೇಸ್ಬುಕ್ Facebook ಕಾರ್ಯಾಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

Facebook
Facebook
author img

By

Published : Jun 15, 2023, 6:56 AM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ (ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್ಬುಕ್ Facebook ಖಾತೆ ಪ್ರಾರಂಭಿಸಿ ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡಿದಿದ್ದಲ್ಲಿ ಭಾರತದಲ್ಲಿ ಫೇಸ್​​ಬುಕ್​ ಕಾರ್ಯಾಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಅನಾಮಧೇಯ ವ್ಯಕ್ತಿಯೊಬ್ಬರು ನಕಲಿ ಫೇಸ್ಬುಕ್ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣ ಸಂಬಂಧ ಸೌದಿ ಅರೇಬಿಯಾ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಅಲ್ಲಿಯೇ ಜೈಲುವಾಸ ಮಾಡುತ್ತಿರುವ ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ.

ಜೊತೆಗೆ, ಘಟನೆ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ಫೇಸ್ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ನೀಡಬೇಕು. ಭಾರತೀಯ ಪ್ರಜೆಯು ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದೆ. ಮಂಗಳೂರು ಪೊಲೀಸರು ಸಹ ಈ ಪ್ರಕರಣ ಸಂಬಂಧ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ ಏನು?: ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ್ (45) ಕಳೆದ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ಕುಬರ್ ಪ್ರದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದರು. ಕೇಂದ್ರ ಸರ್ಕಾರ ರೂಪಿಸಿದ ಸಿಎಎ ಮತ್ತು ಎನ್‌ಆರ್​​ಸಿ ಕಾಯ್ದೆ ಬೆಂಬಲಿಸಿ 2019ರಲ್ಲಿ ಸೌದಿ ಅರೇಬಿಯಾದಲ್ಲಿ ಶೈಲೇಶ್ ಫೇಸ್​​​ಬುಕ್​ ಪೋಸ್ಟ್ ಹಾಕಿದ್ದರು. ಇದರಿಂದ ಕುಪಿತಗೊಂಡಿದ್ದ ಅನಾಮಿಕರಿಂದ ಶೈಲೇಶ್‌ಗೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ ತಮ್ಮ ಫೇಸ್​​ಬುಕ್​​ ಖಾತೆಯನ್ನು ಶೈಲೇಶ್ ರದ್ದು ಮಾಡಿದ್ದರು. ಆದರೆ, 2020ರ ಫೆಬ್ರವರಿಯಲ್ಲಿ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಆತನ ಜಾತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.

ಇದು ತಿಳಿದ ಕೂಡಲೇ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ಶೈಲೇಶ್ ವಿವರಣೆ ನೀಡಿದ್ದರು. ಇದೇ ವೇಳೆ ಸೌದಿ ಪೊಲೀಸರು ಶೈಲೇಶ್​ನನ್ನು​​ ಬಂಧಿಸಿದ್ದರು. ಮಂಗಳೂರಿನಲ್ಲಿ ಆತನ ಪತ್ನಿ ಕವಿತಾ ಘಟನೆ ಕುರಿತು ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್​​ಬುಕ್​​ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಎರಡು ವರ್ಷದಿಂದ ತನಿಖೆ ನಡೆಯುತ್ತಿದೆ. ಈ ಮಧ್ಯೆ ನಿರಪರಾಧಿಯಾದ ತನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸುವಂತೆ ಕೋರಿ ಶೈಲೇಶ್ ಪತ್ನಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಮತ್ತೊಂದೆಡೆ , ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಮತ್ತೊಂದು ಪ್ರಕರಣದಲ್ಲಿ ನ್ಯಾಯಪೀಠಕ್ಕೆ ಹಾಜರಾಗಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿಗಳನ್ನು ತನಿಖೆ ಏಕೆ ನಿಧಾನವಾಗಿ ನಡೆಯುತ್ತಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಕುಲದೀಪ್ ಜೈನ್, ಫೇಸ್ಬುಕ್ ಸಂಸ್ಥೆಯಿಂದ ಸೂಕ್ತ ಸಹಕಾರ ಸಿಗದ ಕಾರಣಕ್ಕೆ ಸೂಕ್ತ ತನಿಖೆ ನಡೆಸಲಾಗಲಿಲ್ಲ ಎಂದು ವಿವರಿಸಿದರು.

ಇದೇ ವೇಳೆ ತನಿಖೆಗೆ ಏಕೆ ಸಹಕಾರ ನೀಡುತ್ತಿಲ್ಲ ಎಂಬುದಾಗಿ ವಿಚಾರಣೆಗೆ ಹಾಜರಿದ್ದ ಫೇಸ್ಬುಕ್ ಪರ ವಕೀಲರನ್ನು ಪ್ರಶ್ನಿಸಿದರು. ಫೇಸ್ಬುಕ್ ಪರ ವಕೀಲರು, ಘಟನೆ ಎಲ್ಲಿ ನಡೆದಿದೆ ಎಂಬುದರ ಕುರಿತು ತಮಗೆ ಸರಿಯಾದ ಮಾಹಿತಿ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದರು. ಇದಕ್ಕೆ ಅಸಮಾಧಾನಗೊಂಡ ನ್ಯಾಯಮೂರ್ತಿಗಳು, ಪ್ರಕರಣದ ತನಿಖೆಗೆ ಸೂಕ್ತ ಸಹಕಾರ ನೀಡದಿದ್ದರೆ ಭಾರತದಲ್ಲಿ ಫೇಸ್ಬುಕ್ ಕಾರ್ಯಾಚರಣೆಯನ್ನೇ ನಿಲ್ಲಿಸಲು ಆದೇಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದರು. ಒಂದು ವಾರದಲ್ಲಿ ಎಲ್ಲ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: ಡೇಟಾ ವರ್ಗಾವಣೆ ನಿಯಮ ಉಲ್ಲಂಘನೆ: ಮೆಟಾಗೆ 1.3 ಶತಕೋಟಿ ಡಾಲರ್ ದಂಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.