ETV Bharat / state

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಟ್ವೀಟ್​ - ಈಟಿವಿ ಭಾರತ ಕನ್ನಡ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವ್ಯಕ್ತಿಯೊಬ್ಬ ಟ್ಟಿಟ್ಟರ್ ಮೂಲಕ ಹುಸಿ ಬಾಂಬ್​ ಬೆದರಿಕೆ ಹಾಕಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

fake-bomb-threat-tweet-to-kempegowda-airport
ಕೆಂಪೇಗೌಡ ವಿಮಾಣ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಟ್ವೀಟ್​
author img

By

Published : Dec 14, 2022, 9:41 PM IST

ದೇವನಹಳ್ಳಿ: ವ್ಯಕ್ತಿಯೊಬ್ಬ ಟ್ವಿಟರ್​ನಲ್ಲಿ ಏರ್‌ಪೋರ್ಟ್​ಗೆ ಬಾಂಬ್ ಹಾಕುವುದಾಗಿ ಹುಸಿ​ ಬೆದರಿಕೆ ಟ್ವೀಟ್ ಮಾಡಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಡಿ.10ರಂದು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಟ್ವಿಟರ್ ಖಾತೆಯಲ್ಲಿ, ನಾನು ಬೆಂಗಳೂರು ಏರ್ ಪೋರ್ಟ್​ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್‌ಗೂ ಟ್ಯಾಗ್ ಮಾಡಿದ್ದಾನೆ.

ಟರ್ಮಿನಲ್ ಮ್ಯಾನೇಜರ್ ರೂಪಾ ಮ್ಯಾಥ್ಯೂ ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಇದು ನಾನ್ ಕಾಗ್ನಿಜಬಲ್ ಕೇಸ್ ಆಗಿರುವುದರಿಂದ, ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಿ ಪ್ರಥಮ ಮಾಹಿತಿ ವರದಿಯನ್ನು(ಎಫ್‌ಐಆರ್‌) ದಾಖಲಿಸಲು ಅನುಮತಿ ಕೋರಿದ್ದರು. ಅದರಂತೆ, ಐಪಿಸಿ 505 ಹಾಗೂ 507 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ. ಪೊಲೀಸ್ ಅಧಿಕಾರಿಗಳು ಸೈಬರ್ ಕ್ರೈಂ ಪೊಲೀಸರ ಜೊತೆ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್‌ ಬೆದರಿಕೆ: ಪೋಷಕರ ನಿಟ್ಟುಸಿರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.