ETV Bharat / state

ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ: ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟನೆ - ಪಾಟೀಲ್ ಬರೆದಿರುವ ಪತ್ರ

ಬಿ.ಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರದ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದು ನಕಲಿ ಪತ್ರ ಎಂದು ಸ್ವತಃ ಶಾಸಕರೇ ಸ್ಪಷ್ಟಪಡಿಸಿದ್ದಾರೆ.

MLA BR Patil
ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ: ಶಾಸಕ ಬಿ.ಆರ್ ಪಾಟೀಲ್ ಸ್ಪಷ್ಟನೆ
author img

By

Published : Jul 25, 2023, 6:35 PM IST

Updated : Jul 25, 2023, 7:21 PM IST

ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ: ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ ಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರದ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನಕಲಿ ಪತ್ರ ಎಂದು ಸ್ವತಃ ಶಾಸಕರೇ ಸ್ಪಷ್ಟಪಡಿಸಿದ್ದಾರೆ. ಜುಲೈ 24ರಂದು ಬಿ ಆರ್ ಪಾಟೀಲ್ ಹೆಸರಿನಲ್ಲಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಜಿಲ್ಲಾ ಉಸ್ತವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆಯ ಬಗ್ಗೆ ಮಾಹಿತಿ ನೀಡಿದ್ದರು.

MLA BR Patil
ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ: ಶಾಸಕ ಬಿ.ಆರ್ ಪಾಟೀಲ್ ಸ್ಪಷ್ಟನೆ

ಬಿ ಆರ್ ಪಾಟೀಲ್ ಬರೆದಿರುವ ಪತ್ರದಲ್ಲಿರುವ ಮಾಹಿತಿ ಈ ರೀತಿ ಇದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರ ವಿಷಯ ಎಂದಿದ್ದಾರೆ.

ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ ಎಂದು ವಿವರಿಸಿದ್ದಾರೆ.

ಪತ್ರ ನಕಲಿ ಎಂದ ಪಾಟೀಲ್​: ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರದ ಬಗ್ಗೆ ಸ್ಪಷ್ಟೀಕರಣ ನೀಡಿರುವ ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ನಕಲಿ ಪತ್ರವನ್ನು ಹರಿಬಿಟ್ಟಿದ್ದಾರೆ. ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಕುತಂತ್ರದಿಂದ ಸುಳ್ಳುಗಳನ್ನು ಹರಿಬಿಡಲಾಗಿದೆ ಎಂದಿದ್ದಾರೆ.

ಈ ಪತ್ರ ತಮ್ಮದಲ್ಲ, ತಾವು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಸಂಬಂಧವಿಲ್ಲ. ಈ ಫೇಕ್ ಲೆಟರ್​ನಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ನಕಲಿ ಪತ್ರದಲ್ಲಿ ನನ್ನ ಹಳೆಯ ಮನೆಯ ವಿಳಾಸ ಬರೆಯಲಾಗಿದೆ. ಪತ್ರವನ್ನು ಡಿಜಿಟಲ್​ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್​ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ. ಈ ಪತ್ರ ನನ್ನದಲ್ಲ. ನನ್ನ ಎಲ್ಲಾ ಅಧಿಕೃತ ಪತ್ರಗಳಲ್ಲಿ ಕ್ರಮ ಸಂಖ್ಯೆಯನ್ನು ಪೂರ್ವನಿಯೋಜಿತವಾಗಿ ಪ್ರಿಂಟ್ ಮಾಡಿರಲಾಗುತ್ತದೆ. ಇದು ಫೇಕ್​ ಲೆಟರ್​ ಅನ್ನಲು ಇಷ್ಟು ಸಾಕು ಎಂದು ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನು ನನ್ನ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಮನಸ್ತಾಪ ಮೂಡಿಸಲು ಕುತಂತ್ರದಿಂದ ಮಾಡಿರುವಂತಿದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೂಡ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿದ್ದೇನೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಮುಗಿದಿಲ್ಲ, ಅಷ್ಟರಲ್ಲೇ ಸ್ವಪಕ್ಷದವರಿಂದ ಅಪಸ್ವರ: ಜಿ ಟಿ ದೇವೇಗೌಡ ಟೀಕೆ

Last Updated : Jul 25, 2023, 7:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.