ETV Bharat / state

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ: ₹2 ಕೋಟಿ ಮೌಲ್ಯದ ಸಾಮಗ್ರಿ ವಶ

author img

By ETV Bharat Karnataka Team

Published : Jan 13, 2024, 7:20 PM IST

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸಾಬೂನು ತಯಾರಿಕೆ ಘಟಕ ಪತ್ತೆ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

fake-mysore-sandal-soap-manufacturing-unit-found-in-hyderabad
ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್​ಗಳು ಸೇರಿದಂತೆ ಸುಮಾರು 2 ಕೋಟಿ ರೂ. ಬೆಲೆಯ ಸಾಮಗ್ರಿ ಪತ್ತೆಯಾಗಿದೆ.

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದ್​ನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಲಕಪೇಟ್ ಠಾಣೆ​​ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆ ಆಗುತ್ತಿರುವ ಬಗ್ಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್​​ಡಿಎಲ್) ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ್ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದ್​​​ನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.

ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಆಗುತ್ತಿರುವುದು ಕಂಡು ಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್​ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಮುಂದಾಗಿದ್ದರು.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪ್​ ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಗಿದೆ ಎಂದು ಕೆಎಸ್​ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್​ಗಳು (ಪ್ರತಿಯೊಂದು ಬಾಕ್ಸ್​ನಲ್ಲಿ 90ರಂತೆ ಒಟ್ಟು 1800 ಪೀಸ್​​ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್​ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಕೆಎಸ್​​ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲ್​​, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ದಾಳಿ: ₹3.47 ಕೋಟಿ ರೂ. ಜಪ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.