ಬೆಂಗಳೂರು: ಕೆ.ಜಿ. ರಸ್ತೆಯ ಪ್ರಭಾತ್ ಕಾಂಪ್ಲೆಕ್ಸ್ನಲ್ಲಿ ನಕಲಿ ಗುರುತಿನ ಚೀಟಿ ಮುದ್ರಣ ಹಾಗೂ ಚುನಾವಣಾ ಆಯೋಗಕ್ಕೆ ನಿರ್ವಹಣಾ ವೆಚ್ಚ ನೀಡಿಲ್ಲವೆಂಬ ಆರೋಪದ ಮೇಲೆ 14 ಮಂದಿ ವಿರುದ್ಧ ಉಪ್ಪಾರಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ, 14 ಜನರನ್ನು ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಚುನಾವಣಾ ಆಯೋಗದ ಕಣ್ಗಾವಲು ಅಧಿಕಾರಿ ದೇವರಾಜ್ ನೀಡಿದ ದೂರಿನ ಮೇರೆಗೆ ಪ್ರಮುಖ ಆರೋಪಿ ಖಲೀಲುಲ್ಲಾ ಸೇರಿ 14 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 171 ಬಿ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 127 ಎ ಅಡಿಯಲ್ಲಿ ಪ್ರಕರಣ ದಾಖಲಿಕೊಂಡಿದ್ದಾರೆ. ಘಟನೆ ಸಂಬಂಧ ಸೋಮವಾರ 5ನೇ ಎಸಿಎಂಎಂ ಕೋರ್ಟ್ ನ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದರು.
ನಿನ್ನೆ ರಾತ್ರಿ ಪ್ರಭಾತ್ ಪ್ರಭಾತ್ ಕಾಂಪ್ಲೆಕ್ಸ್ನಲ್ಲಿ ಚುನಾವಣಾ ಅಕ್ರಮ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಸುಮಾರು 100ಕ್ಕೂ ಹೆಚ್ಚು ಯಂತ್ರಗಳು, ಕಂಪ್ಯೂಟರ್ ಸೇರಿದಂತೆ ದಾಖಲಾತಿಗಳನ್ನು ಜಪ್ತಿ ಮಾಡಿಕೊಂಡಿದ್ದರು.