ETV Bharat / state

ಸುಳ್ಳು ಎಸ್ಸಿ/ಎಸ್ಟಿ ದೌರ್ಜನ್ಯ ಕೇಸ್​: ದೂರುದಾರರಿಂದ ಹಣ ವಸೂಲಿಗೆ ಆದೇಶಿಸಿದ ಹೈಕೋರ್ಟ್ - ನಿಜವಾದ ದೌರ್ಜನ್ಯ ಪ್ರಕರಣಗಳು

ಒಂದೇ ಘಟನೆಗೆ ಸಂಬಂಧಿಸಿದಂತೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ವ್ಯಕ್ತಿಯೊಬ್ಬರ ವಿರುದ್ಧ ಮೂರು ಕೇಸ್ ದಾಖಲಿಸಿದ್ದ ಪ್ರಕರಣದಲ್ಲಿ ದೂರುದಾರರು ಸರ್ಕಾರದಿಂದ ಪಡೆದ ಹಣವನ್ನು ವಸೂಲಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

False SC/ST atrocities case; HC orders recovery of money from complainant

author img

By PTI

Published : Oct 26, 2023, 7:38 PM IST

ಬೆಂಗಳೂರು: ಒಂದೇ ಘಟನೆಗೆ ಸಂಬಂಧಿಸಿದಂತೆ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವ್ಯಕ್ತಿಯೊಬ್ಬರ ವಿರುದ್ಧ ಮೂರು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದ ಮತ್ತು ಈ ಪ್ರಕರಣಗಳ ವಿರುದ್ಧ ಹೋರಾಡಲು ಸಮಾಜ ಕಲ್ಯಾಣ ಇಲಾಖೆಯಿಂದ 3.5 ಲಕ್ಷ ರೂ.ಗಳನ್ನು ಪಡೆದ ಕಕ್ಷಿದಾರರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್, ದೂರುದಾರರಿಂದ ಹಣ ವಸೂಲಿ ಮಾಡುವಂತೆ ನಿರ್ದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ, ಈ ಕಾರಣಕ್ಕಾಗಿಯೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ನಿಜವಾದ ದೌರ್ಜನ್ಯ ಪ್ರಕರಣಗಳು ಇಂಥ ಕ್ಷುಲ್ಲಕ ಪ್ರಕರಣಗಳಲ್ಲಿ ಕಳೆದುಹೋಗುತ್ತವೆ. ಕ್ಷುಲ್ಲಕ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ನಿಜವಾದ ಪ್ರಕರಣವನ್ನು ಹುಡುಕುವುದು ಹುಲ್ಲಿನ ಹೊರೆಯಲ್ಲಿ ಸೂಜಿಯನ್ನು ಹುಡುಕುವಂತಾಗಿದೆ. ಹೆಚ್ಚಿನ ಪ್ರಕರಣಗಳು ಇದೇ ರೀತಿಯಲ್ಲಿ ಕಾನೂನು ಪ್ರಕ್ರಿಯೆಯ ದುರುಪಯೋಗದ ಪ್ರಕರಣಗಳಾಗಿವೆ ಎಂದು ಹೇಳಿದರು. ನಂತರ ಜಿಲ್ಲಾ ಕೇಂದ್ರ ಬಾಗಲಕೋಟೆಯ ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವನ್ನು ಅವರು ರದ್ದುಗೊಳಿಸಿದರು.

ಒಂದೇ ಘಟನೆಯ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಇತರ ಎರಡು ಪ್ರಕರಣಗಳು ಸುಳ್ಳು ಎಂದು ಕಂಡುಬಂದ ನಂತರ ದೂರುದಾರರಿಂದ 1.5 ಲಕ್ಷ ರೂ.ಗಳನ್ನು ವಸೂಲಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕ್ಷುಲ್ಲಕ ಪ್ರಕರಣವನ್ನು ವಿಚಾರಣೆ ಮಾಡಲು ಸಾರ್ವಜನಿಕ ಖಜಾನೆಯಿಂದ ಹಣ ಪಾವತಿಸಲಾಗುವುದರಿಂದ, ದೂರುದಾರರಿಗೆ ಕಾನೂನು ಕ್ರಮ ಜರುಗಿಸಲು ನೀಡಲಾದ 1,50,000 ರೂ.ಗಳನ್ನು ರಾಜ್ಯ ಸರ್ಕಾರ ವಸೂಲಿ ಮಾಡುವುದು ಅವಶ್ಯಕವಾಗಿದೆ ಎಂದು ಅದು ಹೇಳಿದೆ.

ಇಂಥ ಪ್ರಕರಣಗಳಲ್ಲಿ ಯಾವುದೇ ಸಹಾಯ ನೀಡುವ ಮೊದಲು ರಾಜ್ಯ ಸರ್ಕಾರ ದಾಖಲೆಗಳನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಇದರಿಂದ ನಿಜವಾಗಿಯೂ ದೌರ್ಜನ್ಯಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗಾಗಿ ಹಣ ಖರ್ಚು ಮಾಡುವುದನ್ನು ಖಚಿತಪಡಿಸಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ದೂರುದಾರ ಶಾಲಾ ಶಿಕ್ಷಕನಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಆದರೆ ಹಲವಾರು ಸುತ್ತಿನ ಕಾನೂನು ಹೋರಾಟದ ನಂತರ ಅವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವಂತೆ ಆದೇಶಿಸಲಾಗಿತ್ತು. ನಂತರ ಜೂನ್ 2020ರಲ್ಲಿ, ಶಾಲೆಯ ಮುಖ್ಯೋಪಾಧ್ಯಾಯರು ತನ್ನನ್ನು ರಸ್ತೆಯಲ್ಲಿ ಅಡ್ಡಗಟ್ಟಿ ತನ್ನ ಜಾತಿ ಹೆಸರನ್ನು ಉಲ್ಲೇಖಿಸಿ ನಿಂದಿಸಿದರು ಮತ್ತು ಹಲ್ಲೆ ನಡೆಸಿದರು ಎಂದು ಶಿಕ್ಷಕ ಆರೋಪಿಸಿದ್ದರು. ಈ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದಾಗ, ಮುಖ್ಯೋಪಾಧ್ಯಾಯರು ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆಗೆ ಹಾಜರಾದ ಮುಖ್ಯೋಪಾಧ್ಯಾಯರ ಪರ ವಕೀಲರು, ಇದೇ ರೀತಿ ತನ್ನ ಕಕ್ಷಿದಾರನ ವಿರುದ್ಧ ಎರಡು ಪ್ರಕರಣಗಳನ್ನು ಮುಖ್ಯೋಪಾಧ್ಯಾಯರು ದಾಖಲಿಸಿದ್ದರು ಮತ್ತು ಎರಡೂ ಪ್ರಕರಣಗಳಲ್ಲಿ ಪೊಲೀಸರು ಬಿ ರಿಪೋರ್ಟ್ ಹಾಕಿದ್ದನ್ನು ನ್ಯಾಯಾಲಯದ ಗಮನಕ್ಕೆ ತಂದರು.

ವಿಚಾರಣೆಯಲ್ಲಿ ವ್ಯಕ್ತವಾದ ಎಲ್ಲ ಸಂಗತಿಗಳನ್ನು ಗಮನಿಸಿದ ಹೈಕೋರ್ಟ್, ಈ ಪ್ರಕರಣವು ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯ ದುರುಪಯೋಗದ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿದೆ. ಮತ್ತೊಮ್ಮೆ ಇಂಥ ಕೃತ್ಯಗಳಲ್ಲಿ ತೊಡಗಕೂಡದು ಎಂದು ನ್ಯಾಯಾಧೀಶರು ದೂರುದಾರರಿಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕುಮಾರಸ್ವಾಮಿ ಸವಾಲು ಸ್ವೀಕರಿಸುತ್ತೇನೆ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.